ಕಾನೂನುಗಳ ನಡುವೆ ಇರುವ ಅಸ್ಪಷ್ಟತೆ ನಿವಾರಣೆಯಾಗಬೇಕು: ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಪರಸ್ಪರ ದ್ವಂದ್ವಕಾರಿ  ಕಾನೂನುಗಳನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್ ಪುಸ್ತಕ ದಿ ಲೀಡರ್ ಆಫ್ ದಿ ಬಾರ್ ಎಂಬ ಹೊತ್ತಿಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು.
ನ್ಯಾಯಾಲಯಗಳಲ್ಲಿ ಸರ್ಕಾರದ ಕೇಸ್ ಗಳ ಸಂಖ್ಯೆ ಹೆಚ್ಚಿದೆ. ಕಾನೂನಿನಲ್ಲಿಯೇ ಕೆಲ ನ್ಯೂನತೆಗಳಿವೆ. ಆ ನ್ಯೂನತೆಗಳನ್ನು  ಸರಿಪಡಿಸಬೇಕಾಗಿದೆ. ಅದಕ್ಕಾಗಿಯೇ ಈ ವಿವಾದ ನಿರ್ಣಯ ನೀತಿಯನ್ನು ಜಾರಿಗೆ ತರಲಾಗಿದೆ. ಈ ನೀತಿಗೆ ಒಪ್ಪಿಗೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. ಕಾನೂನುಗಳಲ್ಲಿ ಇರುವ ದ್ವಂದ್ವಗಳಿಂದಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಹೀಗಾಗಿ ಕಾನೂನಿನಲ್ಲಿ‌ ಇರುವ ದ್ವಂದ್ವಗಳ  ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇಲಾಖೆಗಳ ಮುಖ್ಯಸ್ಥರು ಮತ್ತು ಅಡ್ವೋಕೇಟ್ ಜನರಲ್ ನಡುವೆ ಸಮನ್ವಯ ಇರಬೇಕೆಂಬುದು ನನ್ನ ಭಾವನೆ. .ಕಾನೂನು ರಚನೆ ಮಾಡುವಾಗ ಒಂದು ಅಲ್ಪ ವಿರಾಮ, ಪೂರ್ಣ ವಿರಾಮ ಕೂಡ ಹಲವಾರು ಅರ್ಥಗಳನ್ನು ನೀಡುತ್ತದೆ. ಇದರಿಂದ ಕಾನೂನು  ಸರಳವಾಗಬೇಕು. ಈ ರೀತಿಯ ಸಮಸ್ಯೆ  ನಿವಾರಣೆ ಆಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಫಿ ಟೇಬಲ್ ಬುಕ್ ಅದ್ಭುತವಾಗಿದೆ ಎಂದು  ಮೆಚ್ವುಗೆ ವ್ಯಕ್ತ ಪಡಿಸಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,  ಲೊಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ, ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಎಸ್ ಆರ್ ಬನ್ನೂರಮಠ, ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಂದಿನ ಪ್ರಮುಖ ಸುದ್ದಿ :-   ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement