ಪಶ್ಚಿಮ ಬಂಗಾಳದಲ್ಲಿ ೮ ಹಂತದಲ್ಲಿ ಚುನಾವಣೆ ಆಯೋಜಿಸಲು ಮೋದಿ, ಶಾ ಸೂಚನೆಯಿದೆಯೇ?

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಸೂಚನೆ ಮೇರೆಗೆ ಪಶ್ಚಿಮ ಬಂಗಾಳದಲ್ಲಿ ೮ ಹಂತಗಳಲ್ಲಿ ಮತದಾನ ನಿಗದಿಪಡಿಸಲಾಗಿದೆಯೇ ಎಂದು ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
ಆಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೆರಿ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ ಸಮಯವಿದೆಯೇ ಎಂಬುದನ್ನು ನೋಡಿಕೊಂಡು ರಾಜ್ಯದ ಜಿಲ್ಲೆಗಳಲ್ಲಿ ಚುನಾವಣೆ ನಿಗದಿಪಡಿಸಲು ಅವಕಾಶವಿದೆಯೇ ಎಂದು ನೋಡಿಕೊಂಡು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ದಿನಾಂಕ ಆಯೋಜಿಸಿರುವ ಸಾಧ್ಯತೆಯಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಆಸ್ಸಾಂ ರಾಜ್ಯದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ೮ ಹಂತಗಳಲ್ಲಿ ಏಕೆ ಆಯೋಜಿಸಲಾಗುತ್ತಿದೆ. ಚುನಾವಣಾ ಆಯೋಗವೇ ಜನರಿಗೆ ನ್ಯಾಯ ಒದಗಿಸದಿದ್ದರೆ ಜನರು ಎಲ್ಲಿ ಹೋಗಬೇಕು. ಬಂಗಾಳದಲ್ಲಿ ೨೯೪ ಕ್ಷೇತ್ರಗಳಿವೆ ಆದರೆ ೮ ಹಂತಗಳಲ್ಲಿ ಮತದಾನ ಯಾಕೆ? ಎಂದು ಹೇಳಿದ್ದಾರೆ.
ಬಿಜೆಪಿ ಬಯಸಿದಂತೆ ಚುನಾವಣಾ ದಿನಾಂಕ ನಿಗದಿಗೊಳಿಸಲಾಗಿದೆ ಎಂಬುದು ನನಗೆ ಕೆಲ ಮೂಲಗಳಿಂದ ತಿಳಿದಿದೆ. ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್‌ ಶಾ ಪಶ್ಚಿಮ ಬಂಗಾಳದಲ್ಲಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಪ್ಯಾನ್ -ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಣೆ ಮಾಡಿದ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement