ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಬ್ಬಿಗೆರೆಯಲ್ಲಿ ನಡೆದಿದೆ.
ಯಾದಗಿರಿ ಮೂಲದ ಹುಸೇನ್‌ ಪುತ್ರ ಬಾಬರ್‌ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಕೂಲಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಹುಸೇನ್‌ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್‌ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ. ಪುತ್ರ ಬಾಬರ್‌ ಗಾರೆ ಕೆಲಸ ಮಾಡುತ್ತಿದ್ದ. ಮದ್ಯವ್ಯಸನಿಯಾಗಿದ್ದ ಬಾಬರ್‌, ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬಂದು ಪಾಲಕರ ಜತೆ ಜಗಳ ಮಾಡುತ್ತಿದ್ದ. ಹಣ ಕೊಡು ಎಂದು ಪೀಡಿಸುತ್ತಿದ್ದ. ಸಾಕಷ್ಟು ಬಾರಿ ಬುದ್ದಿವಾದ ಹೇಳಿದ್ದರೂ ತನ್ನ ವ್ಯಸನ ಮುಂದುವರಿಸಿದ್ದ.
ಮದ್ಯಪಾನ ಮಾಡಿ ಮನೆಗೆ ಬಂದ ಬಾಬರ್‌ ಹಣ ನೀಡುವಂತೆ ಕೇಳಿದ್ದಾನೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಕೋಪದಲ್ಲಿ ಕೊಡಲಿಯ ಹಿಂಭಾಗದಿಂದ ಮಗನ ಮೇಲೆ ಹುಸೇನ್‌ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ಬಾಬರ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಹುಸೇನ್‌ನನ್ನು ಬಂಧಿಸಲಾಗಿದೆ ಎಂದು ಗಂಗಮ್ಮನಗುಡಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಬಿಜೆಪಿ ಜೊತೆ ಮೈತ್ರಿಯ ನಂತರ ಜೆಡಿಎಸ್ ತೊರೆದ ಹಿರಿಯ ಮುಸ್ಲಿಂ ನಾಯಕ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement