ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ.
ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ ರೈತರು ಶನಿವಾರ ದೆಹಲಿ ಹೋರಾಟದ ಮುಂಚೂಣಿ ನಾಯಕರಾದ ರಾಕೇಶ್ ಟಿಕಾಯತ್, ಯೋಗೇಂದ್ರ ಯಾದವ್ ಮತ್ತಿತರರಿಗೆ ಆಹ್ವಾನ ನೀಡಿದ್ದಾರೆ.
ಕೇಂದ್ರ ಸರ್ಕಾರ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ಕಳೆದ 92 ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಮುನ್ನಡೆಸುತ್ತಿದೆ. ‘ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿದೆ. ಆದರೆ ಕೇಂದ್ರ ಸರ್ಕಾರ ‘ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲ’ ಎಂದು ಹೇಳಿದೆ. ಹಾಗಾಗಿ ಸಮಸ್ಯೆ ಜಟಿಲಗೊಂಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement