ಮೀಸಲಾತಿ ಹಕ್ಕೊತ್ತಾಯಕ್ಕೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಭೆ

ಬೆಂಗಳೂರು: ಒಕ್ಕಲಿಗ ಮೀಸಲಾತಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಮಹತ್ವದ ಸಭೆ ನಗರದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ
ನಡೆಯಿತು.ಒಕ್ಕಲಿಗ ಸಮುದಾಯದ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಮುದಾಯದ ಹಿರಿಯರು ಮೀಸಲಾತಿ ವಿಚಾರ ಪ್ರಸ್ತಾಪಿಸಿದರು.
ಹಿಂದೆ ನಮಗೆ 14 ಪರ್ಸೆಂಟ್೧೪% ಮೀಸಲಾತಿ ನೀಡಲಾಗಿತ್ತು. ಆದರೆ ಅದನ್ನು ಈಗ ೪% ಇಳಿಸಲಾಗಿದೆ. ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಸುಮಾರು 90 ಲಕ್ಷಕ್ಕೂ ಹೆಚ್ಚು ಇರುವ ಒಕ್ಕಲಿಗ ಸಮುದಾಯ ಆರ್ಥಿವಾಗಿ ದುರ್ಬಲರಾಗಿದ್ದಾರೆ. ಒಕ್ಕಲುತನವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕೆಲವರು ಸೂಕ್ತವಾದಂತಹ ಸ್ಥಾನಮಾನ ಸಿಗದೆ ಮತ್ತು ಅವಕಾಶಗಳು ಸಿಗದೇ ಕಷ್ಟದಲ್ಲಿದ್ದಾರೆ. ಮೀಸಲಾತಿಗಾಗಿ ಗುರಿಮುಟ್ಟುವವರೆಗೂ ನಮ್ಮ ಹೋರಾಟವನ್ನು ಮುಂದುವರಿಸ ಬೇಕೆಂದು ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು ಅವರು ಮಾತನಾಡಿ ಒಕ್ಕಲಿಗರ ಮೀಸಲಾತಿ ಕುರಿತಂತೆ ನಮ್ಮ ನ್ಯಾಯಯುತ ಬೇಡಿಕೆ ರಾಜ್ಯ ಸರ್ಕಾರದ ಮುಂದಿಡಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ನಾವು ಎಲ್ಲರೂ ಒಗ್ಗಟ್ಟಾಗಿ ದನಿ ಎತ್ತಬೇಕಾಗಿದೆ ಎಂದು ಪ್ರತಿಪಾದಿಸಿದರು.
ಸಾಹಿತಿ ಮುಕುಂದರಾಜು ಮಾತನಾಡಿ , ಮೀಸಲಾತಿ ಕಡಿತಗೊಳಿಸಿದಾಗಲೇ ನಾವು ಎಚ್ಚೆತ್ತುಕೊಳ್ಳಬೇಕಿತ್ತು. ಹಲವು ಸಮುದಾಯಗಳು ತಮ್ಮ ಹೋರಾಟ ಆರಂಭಿಸಿವೆ. ನಾವು ಸರ್ಕಾರದ ಮುಂದೆ ಬೇಡಿಕೆ ಮುಂದಿಡಲು ಹೋರಾಟ ಅನಿವಾರ್ಯ ಎಂದರು.
ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕರಾದ ಆಡಿಟರ್ ನಾಗರಾಜ್ ಯಲಚವಾಡಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶಯ ಮತ್ತು ಆಶೀರ್ವಾದದಿಂದ ಹೋರಾಟವನ್ನು ತೀವ್ರಗೊಳಿಸಲಾಗುತ್ತಿದೆ ಎಂದರು.

ಪ್ರಮುಖ ಸುದ್ದಿ :-   ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : 9 ಮಂದಿಗೆ ಗಾಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement