ಮೈಸೂರು: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ ೩೦,೦೦೦ರೂ. ಲಂಚ ಕೇಳಿದ್ದರು. ಈ ಕುರಿತು ಕೇಶರಾಮ್ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಶುಕ್ರವಾರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಡಿಒ ಲೋಕೇಶ ಹಾಗೂ ದ್ವಿತಿಯ ದರ್ಜೆ ಸಹಾಯಕ ವೆಂಕಟೇಶ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಭ್ರಷ್ಟಾಚಾರ ನಿಗ್ರಹದಳದ ಎಸ್.ಪಿ. ಅರುಣಾಂಶಗಿರಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಪರಶುರಾಮಪ್ಪ, ಪೊಲೀಸ್ ನಿರೀಕ್ಷಕ ಕರೀಮ್ ರಾವತರ ಹಗೂ ಕೆ.ಎಸ್.ನಿರಂಜನ ದಾಳಿ ನಡೆಸಿದರು.
ಕಳೆದ ಹಲವು ದಿನಗಳಿಂದ ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಆದರೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇತ್ತು. ಇಬ್ಬರು ಸಾಕ್ಷಿಸಮೇತ ಸಿಕ್ಕಿಬಿದ್ದಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ