ವಿಜಯಾನಂದ ಕಾಶಪ್ಪನವರಷ್ಟು ದೊಡ್ಡ ನಾಯಕ ನಾನಲ್ಲ:ನಿರಾಣಿ ವ್ಯಂಗ್ಯ

posted in: ರಾಜ್ಯ | 0

ಕೊಪ್ಪಳ: ಪಂಚಮಸಾಲಿ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ.  ಮಾಜಿ ಶಾಸಕ ವಿಜಯ ಕಾಶಪ್ಪನವರಷ್ಟು ದೊಡ್ಡ  ನಾಯಕ ನಾನಲ್ಲ. ಅವರು ರಾಷ್ಟ್ರೀಯ ಅಧ್ಯಕ್ಷರು. ಅವರೇ ನಾಯಕತ್ವ ತೆಗೆದುಕೊಂಡು ಹೋರಾಟ ಮಾಡಲಿ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.
ಶನಿವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ವಿಜಯಾನಂದ ಕಾಶಪ್ಪನವರ ತಮಗೆ ತಿಳಿದಂತೆ ಮಾಡಲಿ ಎಂದ ಅವರು, ನಾವು ಸರ್ಕಾರ ಮಟ್ಟದಲ್ಲಿ ಏನೇನು ಮಾಡಬೇಕೊ  ಅದನ್ನು ಮಾಡುತ್ತೇವೆ. 2ಎಗೆ ಸೇರ್ಪಡೆ ಮಾಡಲು ನಾವು ಕೂಡ ಹೋರಾಟ ಮಾಡುತ್ತಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾಕೆ ಮೌನವಾಗಿದ್ದಾರೆ  ಎಂಬುದು ನನಗೆ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ವೀರಶೈವ -ಲಿಂಗಾಯಿತ ಸಮುದಾಯದಲ್ಲಿ ಅನೇಕ ಉಪಸಮುದಾಯಗಳಿದ್ದು, ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದರೆ ಸಮಸ್ತ  ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಗಣಿ  ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ವೀರಶೈವ ಲಿಂಗಾಯತದಲ್ಲಿ ಕುಂಬಾರರು, ಹಡಪದರು ಸೇರಿ ಇನ್ನೂ ಅನೇಕ ಸಮುದಾಯಗಳು ಇವೆ. ಆ ಸಣ್ಣ ಸಮುದಾಯಗಳು ಹೋರಾಟ ಮಾಡಿ ಶಕ್ತಿ ಪ್ರದರ್ಶನ ಮಾಡುವಷ್ಟು ಬಲ ಹೊಂದಿಲ್ಲ. ಈ ಸಮುದಾಯವರು ಶಾಸಕರು ಅಥವಾ ಸಂಸದರಾಗಿಲ್ಲ. ಹೀಗಾಗಿ ಅಂತಹ ಸಮುದಾಯಕ್ಕೂ ಸೌಲಭ್ಯ ಸಿಗಬೇಕು. ಹೀಗಾಗಿ  ಸಮಸ್ತ ವೀರಶೈವ-ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.
ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 3ಬಿ ಯಿಂದ 2ಎಗೆ ಸೇರ್ಪಡೆ ಮಾಡಬೇಕೆಂಬ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಜತೆಗೆ ವೀರಶೈವ-ಲಿಂಗಾಯಿತ ಸಮುದಾಯದಲ್ಲಿ ಸಣ್ಣ ಸಣ್ಣ ಉಪಸಮುದಾಯಗಳು ಸೌಲಭ್ಯದಿಂದ ವಂಚಿತವಾಗಿವೆ..ಒಟ್ಟಾರೆ  ಸಮಸ್ತ ವೀರಶೈವ-ಲಿಂಗಾಯಿತ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು..
ಮೀಸಲಾತಿಗಾಗಿ ವೀರಶೈವ ಲಿಂಗಾಯತರು ಮಾತ್ರ ಹೋರಾಟ ಮಾಡುತ್ತಿಲ್ಲ. ಹಾಲುಮತ ಸಮಾಜದವರು, ವಾಲ್ಮೀಕಿ ಸಮುದಾಯದವರು ಹೋರಾಟ ಮಾಡುತ್ತಿದ್ದಾರೆ. ಅದನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶೀಲನೆ ಮಾಡಬೇಕು. ಸಚಿವ ಸಂಪುಟ ಸಭೆಯಲ್ಲಿ ಸಾಧಕ-ಬಾಧಕಗಳನ್ನು ನಿರ್ಧಾರ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಪಂಚಮಸಾಲಿ  ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆಯೋಗವು ಸ್ವಾಯತ್ತ ಸಂಸ್ಥೆಯಾಗಿದ್ದು, ಸಾಕಷ್ಟು ಅಧ್ಯಯನ ನಡೆಸಿ ವರದಿ ನೀಡುತ್ತದೆ. ನಂತರವೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಓಲಾ, ಉಬರ್‌ ಆಟೋ ಸರ್ವಿಸ್‌ : ಶೇ.5 ಸೇವಾ ಶುಲ್ಕ, ಜಿಎಸ್‌ಟಿ ಸೇರಿಸಿ ಪ್ರಯಾಣ ದರ ನಿಗದಿ ಕುರಿತು ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement