೩ ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

posted in: ರಾಜ್ಯ | 0

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದ ಬ್ರಿಡ್ಜ್‌ ಬಳಿ ಶನಿವಾರ ಕೊಳೆತ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಬಾಲಕನನ್ನು ನರಿಬೋಳ ಗ್ರಾಮದ ಮಹೇಶ (೧೪) ಎಂದು ಗುರುತಿಸಲಾಗಿದೆ. ಈತ ಕಳೆದ ೩ ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದ. ಈತನ ಮರ್ಮಾಂಗಕ್ಕೆ ಗಾಯ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದೆ.
ನರಿಬೋಳ ಗ್ರಾಮದ ಮಹೇಶ್‌ ಇದೇ ಗ್ರಾಮದ ಅನ್ಯ ಕೋಮಿನ ಬಾಲಕಿಯೊಂದಿಗೆ ಅತ್ಯಂತ ಸಲುಗೆಯಿಂದ ಇದ್ದ ಎಂದು ಹೇಳಲಾಗಿದೆ. ಇದರಿಂದಾಗಿ ಯುವತಿಯ ಕುಟುಂಬಸ್ಥರು ಮಹೇಶನನ್ನು ಅಪಹರಣ ಮಾಡಿ ಕೊಲೆ ಮಾಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಮೆಹೆಬೂಬ್ ಸೇರಿದಂತೆ ಮೂವರು ಶಂಕಿತರನ್ನು ಜೇವರ್ಗಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ 3 ದಿನಗಳ ಹಿಂದೆ ಕೊಲೆ ಮಾಡಿ ಬಿಸಾಡಿದ ಗೋಣಿ ಚೀಲ ಇಂದು ಬೆಳಗಿನ ಜಾವ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಗೋಡೆಗಳ ಮಧ್ಯೆ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜೇವರ್ಗಿ ಪೊಲಿಸರು ಗೋಣಿ ಚೀಲವನ್ನು ತೆಗೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಬಾಲಕನ ದೇಹ ಪತ್ತೆಯಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಾಂತಾರದ 'ವರಾಹರೂಪಂ' ಹಾಡಿನ ವಿವಾದ: ಥೈಕ್ಕುಡಂ ಬ್ರಿಜ್‌ ದಾವೆ ತಿರಸ್ಕರಿಸಿದ್ದ ಕೋಝಿಕ್ಕೋಡ್‌ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್‌ ತಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement