ಕೊವಿಡ್‌ ಲಸಿಕೆ: ಖಾಸಗಿ ಆಸ್ಪತ್ರೆಗಳಲ್ಲಿ ೨೫೦ ರೂ.ದರ ನಿಗದಿ

ನವ ದೆಹಲಿ: ದೇಶದಲ್ಲಿ ಮಾರ್ಚ್ 1 ರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಲಸಿಕೆ ಹಾಕುವ ಎರಡನೇ ಹಂತದ ಅಭಿಯಾನ ನಡೆಯಲಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ ಗೆ 250 ರೂಪಾಯಿ ನಿಗದಿಪಡಿಸಿ ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ.
ದೇಶದ 10,000 ಸರ್ಕಾರಿ ಆಸ್ಪತ್ರೆಗಳು ಹಾಗೂ 20,000 ಖಾಸಗಿ ಆಸ್ಪತ್ರೆಗಳಲ್ಲಿ ಮಾರ್ಚ್‌ ೧ರಿಂದ ಎರಡನೇ ಹಂತದ ಲಸಿಕೆ ನೀಡುವುದನ್ನು ಆರಂಭಿಸಲಿದೆ.60ವರ್ಷ ದಾಟಿದವರು ಮತ್ತು 45 ವರ್ಷ ದಾಟಿದ ರೋಗ ಇರುವವರಿಗೆ ಲಸಿಕೆ ಹಾಕಲಾಗುತ್ತಿದೆ.ಸರ್ಕಾರದ ಕೋವಿನ್ ಆಪ್ ಮತ್ತು ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದಾಗಿದೆ‌.60 ವರ್ಷ ದಾಟಿದ ಹಿರಿಯ ನಾಗರಿಕರು ವಯಸ್ಸಿನ ಗುರುತಿನ ಚೀಟಿ ಹಾಗೂ ೪೫ ವರ್ಷ ದಾಟಿದ ಇರುವ ಗುರುತಿನ ಚೀಟಿ ತೋರಿಸು ಕಡ್ಡಾಯವಾಗಿದೆ.
ಕೇಂದ್ರ ಸಚಿವ ಸಂಪುಟ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿಗೆ ಲಸಿಕೆ ಹಾಕಲು ಅನುಮತಿ ನೀಡಿತ್ತಯ.ಈ ಹಿನ್ನೆಲೆಯಲ್ಲಿ ಮಾರ್ಚ್ 1 ಒಂದರಿಂದ ದೇಶದಲ್ಲಿ ಲಸಿಕೆ ಹಾಕುವ ಕಾರ್ಯ ಆರಂಭವಾಗಲಿದೆ

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement