ಉಪಚುನಾವಣೆ-೪ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸಿಎಂ ಬಿಎಸ್‌ವೈ

ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು.
ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಯಾವುದೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲ್ಲ. ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ ಎಂದು ಹೇಳಿದರು.
ಬೆಳಗಾವಿ ಲೋಕಸಭಾ ಕ್ಷೇತ್ರ ಅಲ್ಲದೇ 3 ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಸಂದರ್ಭದಲ್ಲೂ ಉಪಚುನಾವಣೆ ಎದುರಾದರೂ ನಾವು ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಾಜಿ ಕೇಂದ್ರ ಸಚಿವ ಸುರೇಶ್‌ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ, ಕಾಂಗ್ರೆಸ್‌ ಶಾಸಕ ನಾರಾಯಣರಾವ್‌ ಅವರ ನಿಧನದಿಂದ ತೆರವಾದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ, ಜೆಡಿಎಸ್‌ ಶಾಸಕ ಎಂಸಿ ಮನಗೂಳಿ ಅವರ ನಿಧನದಿಂದ ಖಾಲಿಯಾದ ಸಿಂಧಗಿ ವಿಧಾನಸಭಾ ಕ್ಷೇತ್ರ ಹಾಗೂ ಶಾಸಕ ಪ್ರತಾಪ್‌ಗೌಡ ಪಾಟೀಲ್‌ ಅವರ ರಾಜೀನಾಮೆಯಿಂದ ತೆರವಾದ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಯಾಗಬೇಕಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement