ಬಾಗಲಕೋಟೆ: ಮೂವರು ಕಾಂಗ್ರೆಸ್ ಮುಖಂಡರು ಸಿಎಂ ಹುದ್ದೆಯ ರೇಸ್‌ನಲ್ಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ನಂತರ ಎಲ್ಲ ಸೇರಿ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು.
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಕ್ಕೆ ಬಂದ ಮೇಲೆ ನಾವೆಲ್ಲಾ ತೀರ್ಮಾನಿಸುತ್ತೇವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಸ್‌ಆರ್ ಪಾಟೀಲ್ ಯಾರಾದರೂ ಸಿಎಂ ಆಗಬಹುದು. ಪಕ್ಷದ ಮುಖಂಡರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಚುನಾವಣೆ ಆಗುವವರೆಗೂ ಸಿಎಂ ಬಗ್ಗೆ ಯಾರೂ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್‌ನಿಂದ ಸೂಚನೆ ನೀಡಿದ್ದಾರೆ. ಚುನಾವಣೆ ಆದ ಮೇಲೆ ಶಾಸಕಾಂಗ ಪಕ್ಷ ಹಾಗೂ ದೆಹಲಿ ನಾಯಕರು ತೀರ್ಮಾನ ತೆಗೆದುಕೊಳ್ತಾರೆ. ನಾವು ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ 165 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.
ಬಿಜೆಪಿಯವರಿಗೆ ಆಡಳಿತ ಮಾಡಿ ಗೊತ್ತಿಲ್ಲ. ಆದರೆ, ವಿರೋಧ ಚೆನ್ನಾಗಿ ಮಾಡ್ತಾರೆ. ನಾವು ಪೆಟ್ರೋಲ್ ಬೆಲೆ ಒಂದೆರಡು ರೂಪಾಯಿ ಏರಿಸಿದ್ರೆ, ಎಲ್ಲೆಡೆ ಬೊಬ್ಬೆ ಹೊಡೆದ್ರು. ಇವತ್ತು ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ. ದೀನದಲಿತರು, ಮಧ್ಯಮ ವರ್ಗ ಬದುಕುವ ಹಾಗೇ ಇಲ್ಲ. ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನು ತಂದು ಶ್ರೀಮಂತರು ಶ್ರೀಮಂತರೇ ಆಗ್ತಿದ್ದಾರೆ, ಬಡವರು ಬಡವರಾಗಿಯೇ ಇರುವಂತಾಗಿದೆ ಎಂದು ನುಡಿದರು.
ಜನಕ್ಕಾಗುತ್ತಿರುವ ತೊಂದರೆಗಳಿಂದಾಗಿ ಜನ ರೋಸಿ ಹೋಗಿದ್ದಾರೆ. ಈಗ ಚುನಾವಣೆ ಆಗಲಿ ನೋಡೋಣ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಭವಿಷ್ಯ ನುಡಿದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ