ಕೆಂಪು ಕೋಟೆ ಹಿಂಸಾಚಾರ ಬಿಜೆಪಿ ಪೂರ್ವ ನಿಯೋಜಿತ ಕೃತ್ಯ: ಕೇಜ್ರಿವಾಲ್‌

ಗಣರಾಜ್ಯೋತ್ಸವದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರ ಬಿಜೆಪಿಯ ಪೂರ್ವ ನಿಯೋಜಿತ ಕೃತ್ಯ ಎಂದು ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಮಾತನಾಡಿ, ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನು ಕೇಸರಿ ಪಕ್ಷ ಮೊದಲೇ ಯೋಜಿಸಿತ್ತು. ಕೇಂದ್ರದ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರಂಟ್
ಇದ್ದಂತೆ ಎಂದರು.
ಇಡೀ ಕೆಂಪು ಕೋಟೆಯ ಘಟನೆಯನ್ನು ಅವರೇ ಯೋಜಿಸಿದ್ದರು. ದೆಹಲಿಯ ಬೀದಿಗಳು ತಿಳಿದಿಲ್ಲದ ಕಾರಣ ಉದ್ದೇಶಪೂರ್ವಕವಾಗಿ ತಪ್ಪು ಮಾರ್ಗವನ್ನು ತೋರಿಸಲಾಗಿದೆ ಎಂದು ಅನೇಕರು ಹೇಳಿದ್ದರು. ಧ್ವಜವನ್ನು ಹಾರಿಸಿದವರು ಬಿಜೆಪಿ ಕಾರ್ಯಕರ್ತರು. ಕೇಂದ್ರ ಸರ್ಕಾರವು ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ರೈತರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದೆ. ಬ್ರಿಟಿಷರಿಗೂ ಸಹ ಈ ಧೈರ್ಯ ಇರಲಿಲ್ಲ. ಇವರು ನಮ್ಮ ರೈತರನ್ನು ಭಯೋತ್ಪಾದಕರು ಎಂದು ಕರೆಯುತ್ತಾರೆ ಎಂದು ಅವರು ಹೇಳಿದರು. ಸರ್ಕಾರವು ಅವರ ಜಮೀನುಗಳನ್ನು ತೆಗೆದುಕೊಂಡು ಅದನ್ನು ಬಂಡವಾಳಶಾಹಿಗಳಿಗೆ ನೀಡುತ್ತಿದೆ ಎಂದು ಆರೋಪಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement