ಪುದುಚೇರಿ: ಕಾಂಗ್ರೆಸ್‌ಗೆ‌ ಮೊದಲ ಶಾಂಕಿಂಗ್‌ ನ್ಯೂಸ್‌…!

ಪುದುಚೇರಿ: ತನ್ನ ಆಂತರಿಕ ಭಿನ್ನಮತದಿಂದಾಗಿ ಇತ್ತೀಚೆಗೆ ಸರ್ಕಾರ ಕಳೆದುಕೊಂಡ ಕಾಂಗ್ರೆಸ್ ಏ.೬ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೇಳಿದೆ.
ಚುನಾವಣಾಪೂರ್ವ ಸಮೀಕ್ಷೆ ನಡೆಸಿರುವ ಎಬಿಪಿ-ವೋಟರ್ಸ್ ಸಮೀಕ್ಷೆ ಪಾಂಡಿಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.
ಒಟ್ಟು ೩೦ ವಿಧಾಸಭಾ ಕ್ಷೇತ್ರವಿರುವ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿರುವ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿ 17ರಿಂದ 20 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತಗಳಿಂದ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ.
ಕಾಂಗ್ರೆಸ್ಗೆ 8ರಿಂದ 12 ಸ್ಥಾನ ಗಳಿಸಲಷ್ಟೇ ಆಧ್ಯವಾಗಲಿದೆ. ಇತರ ಪಕ್ಷಗಳು 1-3 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಚುನಾವಣೆಗೆ ಇನ್ನೂ ಒಂದು ತಿಂಗಳಿದ್ದು ಚುನಾವಣೆ ಸಮೀಪ ಬಂದಾಗ ಸಾಮಾನ್ಯವಾಗಿ ಬಹುತೇಕ ಸ್ಪಷ್ಟಚಿತ್ರಣ ಸಿಗಲಿದ್ದು, ಆದರೂ ಈ ಚುನಾವನಾ ಪೂರ್ವ ಸಮೀಕ್ಷೆ ಕಾಂಗ್ರೆಸ್‌ ಮಟ್ಟಿಗೆ ಶಾಂಕಿಂಗ್‌ ನ್ಯೂಸ್‌. ಇದು ತಮಿಳುನಾಡು ರಾಜಕೀಯದ ಮೇಲೆಯೂ ಪರಿಣಾಮ ಬೀಳುವುದೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement