ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಇನ್ನಷ್ಟು ಬೆಂಬಲ ಪಡೆಯಲು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಾರ್ಚ್‌ನಲ್ಲಿ ಐದು ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಟಿಕಾಯತ್ ಮಾರ್ಚ್ 1 ರಿಂದ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ರೈತರ ಸಭೆಗಳು ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯಲಿದ್ದು, ಮಾರ್ಚ್‌ನಲ್ಲಿ ಉತ್ತರಪ್ರದೇಶದಲ್ಲಿ ಎರಡು ಸಭೆಗಳು ನಡೆಯಲಿವೆ. ರಾಜಸ್ಥಾನದಲ್ಲಿ ಎರಡು ಮತ್ತು ಮಧ್ಯಪ್ರದೇಶದಲ್ಲಿ ಮೂರು ಸಭೆಗಳು ನಡೆಯಲಿವೆ. ಕೊನೆಯ ಮೂರು ಸಭೆಗಳು ಮಾರ್ಚ್ 20, 21 ಮತ್ತು 22 ರಂದು ಕರ್ನಾಟಕದಲ್ಲಿ ನಡೆಯಲಿದೆ ಎಂದು ಎಂದು ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದರು.
ಮಾರ್ಚ್ 6 ರಂದು ತೆಲಂಗಾಣದಲ್ಲಿ ಒಂದು ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದೆ, ಆದರೆ ರಾಜ್ಯದಲ್ಲಿ ಕೆಲವು ಚುನಾವಣೆಗಳಿಂದಾಗಿ ನಮಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಅನುಮತಿ ನೀಡಿದರೆ, ತೆಲಂಗಾಣದಲ್ಲಿ ಸಭೆ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಪಡಿಸಬೇಕು ಮತ್ತು ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಖಾತರಿಪಡಿಸುವ ಹೊಸ ಕಾನೂನು ರೂಪಿಸಬೇಕು ಎಂಬ ಬೇಡಿಕೆಯೊಂದಿಗೆ ಸಾವಿರಾರು ರೈತರು ನವೆಂಬರ್‌ನಿಂದ ದೆಹಲಿಯ ಗಡಿ ಬಿಂದುಗಳಾದ ಟಿಕ್ರಿ, ಸಿಂಗು ಮತ್ತು ಗಾಜಿಪುರದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ