ರಾಜ್ಯದಲ್ಲಿ ಹೆಚ್ಚಿದ ೫೨೧ ಜನರಿಗೆ ಕೊರೊನಾ ಸಂಕು, ಐದು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ರವಿವಾರ 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,331ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ರವಿವಾರ 312 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,05,637ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 350 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,33,097ಕ್ಕೆ ಏರಿಕೆಯಾಗಿದೆ. ಇನ್ನು 5,804 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 121 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement