ಸಿದ್ದರಾಮಯ್ಯನವರ ತವರಿನಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ

ಮೈಸೂರು ಮಹಾನಗರ ಪಾಲಿಕೆ ಮೈತ್ರಿ ಗೊಂದಲಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ತವರು ಜಿಲ್ಲೆಯಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ ತಿಳಿಸಿದ್ದಾರೆ.
ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಆಗಲು ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಕಾರಣ. ಮಾತಿನಂತೆ ಮುಂದಿನಂತೆ ಬಾರಿ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ನೀಡುತ್ತೇವೆ. ಆದರೆ, ಕಾಂಗ್ರೆಸ್ ನಾಯಕರು ತಮ್ಮ ಮಾತಿನ ಮೇಲೆ ಹಿಡಿತ ಹೊಂದಿರಬೇಕು. ಯಾವುದೇ ಡ್ರಾಮಾ, ಗೊಂದಲಗಳಿಲ್ಲದೆ ಮೇಯರ್ ಸ್ಥಾನ‌ ನೀಡಲಾಗುವುದು. ಈ ಬಾರಿಯೇ ಮೇಯರ್‌ ಸ್ಥಾನವನ್ನು ಕೊಡುತ್ತಿದ್ದೇವು. ಆದರೆ, ಜೆಡಿಎಸ್‌ ಬಗ್ಗೆ ಹೀನಾಯವಾಗಿ ಮಾತನಾಡಿದ್ದರಿಂದ ಮೇಯರ್‌ ಸ್ಥಾನವನ್ನು ಕೊಡಲಿಲ್ಲ. ಶಕ್ತಿ ತೋರಿಸಲು ಅಭ್ಯರ್ಥಿ ಹಾಕಿದ್ದೇವೆ ಎಂದು ಸಾ.ರಾ.ಮಹೇಶ್‌ ಹೇಳಿದರು.
ಕಾಂಗ್ರೆಸ್‌ನ ಒಬ್ಬ ನಾಯಕರು ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಕ್ಕೆ ಇಷ್ಟು ತೋರಿಸಿದ್ದೇವೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದನ್ನು ಮುಂದುವರೆಸಿದರೆ, ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮಾತುಕತೆಯಾದಾಗ, ಜೆಡಿಎಸ್‌ಗೆ 3 ಬಾರಿ, ಕಾಂಗ್ರೆಸ್‌ಗೆ 2 ಬಾರಿ ಮೇಯರ್ ಸ್ಥಾನ ಎಂದು ಮಾತುಕತೆಯಾಗಿತ್ತು. ಆದರೆ, ರಾಜ್ಯದಲ್ಲಿ ಮೈತ್ರಿ ಮುರಿದು ಬಿದ್ದಿತು ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಿಟ್ಟರೆ ಕಾಂಗ್ರೆಸ್ ಬಗ್ಗೆ ಯಾವುದೇ ಬೇಸರವಿಲ್ಲ ಎಂದು ಅವತ್ತೇ ಸ್ಪಷ್ಟಪಡಿಸಿದ್ದೆ. ಕಾಂಗ್ರೆಸ್‌ ನಾಯಕರ ಬಳಿಕ ಬಿಜೆಪಿ ಬಳಗ ನನ್ನ ಕಚೇರಿಗೆ ಬಂದಿದ್ದರು. ನಾನು ರಾಜ್ಯ ನಾಯಕರ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿದ್ದರು. ನಾನು ರಾಜ್ಯಾಧ್ಯಕ್ಷನಾಗಿರುವಾಗ ಮೈಸೂರು ಮೇಯರ್ ಸ್ಥಾನ ಪಡೆಯಲಿಲ್ಲ ಎಂಬಂತಾಗುತ್ತದೆ. ಆದ್ದರಿಂದ, ಕಾಂಗ್ರೆಸ್ ಜೊತೆ ಬನ್ನಿ ಎಂದು ಹೇಳಿದ್ದರು. ಇದನ್ನು ನಾವು ಕುಮಾರಸ್ವಾಮಿ ಅವರಿಗೂ ತಿಳಿಸಿದ್ದೆವು. ಬಳಿಕ ತನ್ವಿರ್ ಸೇಠ್ ಮತ್ತೊಮ್ಮೆ ಬಂದು ಮಾತನಾಡಿದರು. ನಂತರ ಧ್ರುವನಾರಾಯಣ್ ಸಹ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement