೩೫೦೦ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿ: ಕಾರಜೋಳ

ಬೆಂಗಳೂರು; ರಾಜ್ಯದಲ್ಲಿ 2021-22 ನೇ ಸಾಲಿನಲ್ಲಿ 3500 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ ‌ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಯೋಗಿ ಇಲಾಖೆ ಖಾತೆ ಸಚಿವ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ವಿಸ್ತೃತ ಯೋಜನಾ ವರದಿ ( ಡಿಪಿಆರ್) ಸಿದ್ಧಪಡಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು
ಈ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಈಗಾಗಲೇ ಅನುಮೋದನೆ ಪಡೆಯಲಾಗಿದ್ದು, ಡಿಪಿಆರ್ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವರ್ಷದಲ್ಲಿ ಒಟ್ಟಾರೆ 25000 ಕಿ.ಮೀ ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು, ಅದರಲ್ಲಿ 15510 ಕಿ.ಮೀ ಗ್ರಾಮೀಣ ರಸ್ತೆಗಳನ್ನು ಎಂಡಿಆರ್ ಗೆ ಹಾಗೂ 9601 ಕಿ.ಮೀ ಎಂಡಿಆರ್ ರಸ್ತೆಗಳನ್ನು ರಾಜ್ಯ ಹೆದ್ದಾರಿಗೆ ಮೇಲ್ದರ್ಜೆಗೇರಿಸಲಾಗಿದೆ. 10 ವರ್ಷಗಳಿಂದ ಈ ಕುರಿತು ಬೇಡಿಕೆ ಇತ್ತು. ಶಾಸಕರು ಅಹವಾಲುಗಳನ್ನು ನೀಡಿದ್ದರು. ಮೇಲ್ದರ್ಜೆಗೇರಿಸಿದ ಈ ರಸ್ತೆಗಳ ನಿರ್ವಹಣೆ ಮತ್ತು ಅಭಿವೃದ್ಧಿ ಯನ್ನು ಏಪ್ರಿಲ್ ನಂತರ ಕೈಗೆತ್ತಿಕೊಳ್ಳಲಾಗುವುದು ಎಂದರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement