ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ ಬದಲಿಗೆ, ಜೂನ್ 21 ರಿಂದ ಜುಲೈ 5 ರ ವರೆಗೆ ನಡೆಯಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್‌ಕುಮಾರ್, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ.24-ಗಣಿತ, ಜೂ. 28-ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ, ಜು.5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement