ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ವಿವಿಪುರಂನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಪ್ರಯೋಗಾಲಕ್ಕೆ ಬಂದಿದ್ದ ಜಯಂತ್ ರೆಡ್ಡಿ ಕಟ್ಟಡದ ಮೇಲಿನಿಂದ ಜಿಗಿದಿದ್ದು, ತಲೆಗೆ ತೀವ್ರ ತರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತರೆಡ್ಡಿ ಮೂರನೇ ಸೆಮ್ ಪರೀಕ್ಷೆ ಬರೆಯಬೇಕಿತ್ತು. ಶಾಲಾ ಶುಲ್ಕ ಪಾವತಿಸದ ಬಗ್ಗೆ ಬೇಸರಗೊಂಡಿದ್ದ ಜಯಂತ್ ರೆಡ್ಡಿ ಪರೀಕ್ಷೆ ಬರೆಯುವ ಬಗ್ಗೆ ಒತ್ತಡಕ್ಕೆ ಒಳಗಾಗಿದ್ದ ಎಂಬ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಶಾಲಾ ಶುಲ್ಕ ಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಲ್ಲವೇ ಪರೀಕ್ಷೆ ಬರೆಯಲಾರದೇ ಖಿನ್ನತೆಗೆ ಒಳಗಾಗಿದ್ದನೇ ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿವಿ ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ