ಕುರಿಗಾರರ ಹೋರಾಟಕ್ಕೆ ಸಿದ್ದರಾಮಯ್ಯ ಸಾಥ್‌

posted in: ರಾಜ್ಯ | 0

ಬೆಂಗಳೂರು: ಅನುಗ್ರಹ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನಡೆದ ಕುರಿಗಾರರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್‌ ನೀಡಿದರು.
ಕುರಿಗಳು ಸತ್ತರೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಲದಿಂದ ನಡೆದ ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿ ಬೆಂಬಲ ಸೂಚಿಸಿದರು ಕುರಿಗಾಹಿಗಳಿಗೆ ಆರ್ಥಿಕ ಅನುಕೂಲ ಆಗುವ ಅನುಗ್ರಹ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಕೆಲ ದಿನಗಳ ಹಿಂದೆ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆಯಲಾಗಿತ್ತು ಎಂದರು.
ಕುರಿಗಾಹಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ವಿಷಮೇವು ತಿಂದು ಅಥವಾ ಇನ್ನಿತರ ಕಾರಣಗಳಿಂದಾಗಿ ಆಕಸ್ಮಿಕವಾಗಿ ಕುರಿಗಳು ಹಾಗೂ ಇತರ ಜಾನುವಾರುಗಳು ಸತ್ತಾಗ ಪಶುಪಾಲಕರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗಿತ್ತು. ಆದರೆ ಇದೀಗ ಈ ಯೋಜನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಆಕಸ್ಮಿಕವಾಗಿ ಮರಣ ಹೊಂದಿದ ಕುರಿ, ಮೇಕೆ, ಹಸು, ಎಮ್ಮೆಗಳಿಗೆ ಈ ಹಿಂದೆ ನೀಡುತ್ತಿದ್ದ ಹಾಗೆ 5000 ರಿಂದ 10,000 ರೂಪಾಯಿ ವರೆಗೆ ಪರಿಹಾರ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement