ಕೆಟ್ಟುಹೋದ ವಿಧಾನ ಪರಿಷತ್ ಸಿಸಿಟಿವಿಗಳು: ಹೊರಟ್ಟಿ ಎಚ್ಚರಿಕೆ

posted in: ರಾಜ್ಯ | 0

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯ ನಿರ್ವಹಿಸದಿರುವುದಕ್ಕೆ ಅಸಮಾಧಾನಗೊಂಡಿರುವ ಸಭಾಪತಿ ಬಸವರಾಜ ಹೊರಟ್ಟಿ ಈ ಕುರಿತು ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಅವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 ಸಿಸಿಟಿವಿಗಳಿವೆ. ಆದರೆ, ಇದರಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿಲ್ಲ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಪರಿಷತ್ತಿನಲ್ಲಿ ಇಲಿಗಳ ಕಾಟ ಕೂಡ ಇದ್ದು, ಕೇಬಲ್, ವೈಯರ್‍ಗಳನ್ನು ಹಾಳು ಮಾಡುತ್ತಿವೆ. ಪರಿಷತ್ತಿನಲ್ಲಿ 300 ನೌಕರರು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಬಹುತೇಕ ಜನರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಸ್ಥಗಿತಗೊಳಿಸಲಾಗಿದೆ. ಕೆಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಹೀಗಾಗಿ ಶಿಸ್ತು ಪಾಲನೆ ಮಾಡಲು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಬೇಕಿದೆ. ಡಿ-ಗ್ರೂಪ್ ನೌಕರರು ಸಮವಸ್ತ್ರಗಳನ್ನು ಧರಿಸಬೇಕು. ಆದರೆ, ಸಾಮಾನ್ಯ ದಿರಿಸಿನಲ್ಲಿ ಬರುತ್ತಿರುವುದು ಗಮನಕ್ಕೆ ಬಂದಿದೆ. ನೌಕರರಿಗೆ ಸಮವಸ್ತ್ರಕ್ಕಾಗಿ ಪ್ರತಿ ತಿಂಗಳೂ ಹಣ ನೀಡಲಾಗುತ್ತಿದೆ. ಮಾರ್ಚ್ ಮೊದಲ ವಾರದಿಂದ ಅಧಿವೇಶನ ನಡೆಯಲಿದ್ದು, ಅಷ್ಟರೊಳಗಾಗಿ ಸಿಸಿಟಿವಿ, ಬಯೋಮೆಟ್ರಿಕ್ ಹಾಜರಾತಿ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪತ್ರದಲ್ಲಿ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ: ಪ್ರಜಾಧ್ವನಿ ಯಾತ್ರೆ ವೇಳೆ ಬಸ್‌ ಮೇಲಿಂದ ಹಣ ಎಸೆದ ಡಿ.ಕೆ. ಶಿವಕುಮಾರ...!

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement