ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ ಎಂದು ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಆರೋಪಿಸಿದರು.
ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರಸೆಲ್ವಂ ಕಮೀಶನ್, ಕಲೆಕ್ಷನ್, ಕರಪ್ಷನ್ ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬಿಜೆಪಿ ಇಂಥವರನ್ನು ಬೆಂಬಲಿಸುತ್ತಿದೆ ಎಂದರು.
ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ರವಿವಾರದಿಂದ ಆರಂಭಗೊಂಡಿದೆ. ಪಕ್ಷದ ಪ್ರಣಳಿಕೆ ಸಿದ್ಧವಾಗುತ್ತಿದೆ ಎಂದು ಸ್ಟಾಲಿನ್ ಹೇಳಿದರು.
ಇತ್ತೀಚಿಗೆ ತಮಿಳುನಾಡಿನಲ್ಲಿ ನಡೆದ ರ್ಯಾಲಿಯಲ್ಲಿ ಗೃಹ ಸಚಿವ ಅಮಿತ್ ಶಾ, ೨ಜಿ ತರಂಗಾಂತರ ಹಂಚಿಕೆ ಮಾಡಿದವರು ಯಾರು? ಎಂದು ಪ್ರಶ್ನಿಸಿದರಲ್ಲದೇ ಈ ಪ್ರಕರಣಗಳಲ್ಲಿ ಒಳ ಹೊಕ್ಕು ನೋಡಿದರೆ ಸತ್ಯ ಗೊತ್ತಾಗುತ್ತದೆ. ಕಾಂಗ್ರೆಸ್ ಪಕ್ಷ ಹಗರಣ ಮಾಡಿದಾಗ ಡಿಎಂಕೆ ಮೈತ್ರಿಪಕ್ಷವಾಗಿತ್ತು ಎಂದು ಆರೋಪ ಮಾಡಿದ್ದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ