ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರವಾಗಿದ್ದು, ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗಬೇಕಿತ್ತು. ಆದರೆ ಮನೆಯಲ್ಲಿ ಕೆಲಸ ಇದ್ದುದರಿಂದ ಹೋಗಲು ಸಾಧ್ಯವಾಗಲಿಲ್ಲ ಎಂದರು.
ಮೈಸೂರು ಮಹಪೌರ ಚುನಾವಣೆ ವಿಚಾರವಾಗಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ ಅವರೊಂದಿಗೆ ನಾನು ಮಾತನಾಡಿದ್ದು ನಿಜ. ಅವರು ಈ ವರ್ಷ ನಮಗೆ ಅಧಿಕಾರ ಬಿಟ್ಟುಕೊಡಬೇಕಿತ್ತು. ಕೊಟ್ಟ ಮಾತು ನಡೆಸಿಕೊಡುತ್ತಾರೆಂದು ನಂಬಿದ್ದೆ. ಜೆಡಿಎಸ್ ಜೊತೆಗೆ ಮೈತ್ರಿ ವಿಚಾರವಾಗಿ ನಾನು ತನ್ವೀರ್ ಸೇಠ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿಯಿಲ್ಲ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಬಿಜೆಪಿಯವರು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಜನರಿಗೆ ಅರ್ಥವಾಗಿದೆ. ನಾಡಿನ ಜನರು ಮತ್ತೆ ಕಾಂಗ್ರೆಸ್ ಕೈ ಹಿಡಿಯುತ್ತಾರೆ. ಯಾವ ಕ್ಷೇತ್ರದಲ್ಲಿ ಸೋಲನುಭವಿಸಿದ್ದೇವೇಯೋ ಅಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ. ೧೯೯೯ರಲ್ಲಿ ಎಸ್.ಎಂ.ಕೃಷ್ಣ ಪಾಂಚಜನ್ಯ ಮೊಳಗಿಸಿ ಅಧಿಕಾರಕ್ಕೆ ಬಂದರು. ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ ಎಂದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ