ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಆರಂಭ

ಲಖನೌ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವುದರಿಂದ ಸರ್ಕಾರ ಪ್ರಾಥಮಿಕ ಶಾಲೆಗಳು ಮಾ.೧ರಿಂದ ಆರಂಭವಾಗಿವೆ.
ಈ ಸಂಬಂಧ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ, ಅದರ ಪ್ರಕಾರವಾಗಿಯೇ ಪ್ರಾಥಮಿಕ ಶಾಲೆಗಳನ್ನು ಸುರಕ್ಷಿತವಾಗಿ ಪುನರಾರಂಭ ಮಾಡಲಾಗಿದೆ.
ವಿದ್ಯಾರ್ಥಿಗಳ ನಡುವೆ ಸಾಕಷ್ಟು ಸಾಮಾಜಿಕ ಅಂತರ, ಫೇಸ್ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಕಡ್ಡಾಯಯವಾಗಿ ಬಳಲಸಲು ಸೂಚಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳ ಶೇ. ಹಾಜರಾತಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಉತ್ತರ ಪ್ರದೇಶ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳು ಆರಂಭಗೊಂಡಿವೆ. ಪೋಷಕರ ಸಮ್ಮತಿ ಪಡದೇ ಶಾಲೆಗಳನ್ನು ಆರಂಭಿಸಲಾಗಿದೆ. ಎಲ್ಲಾ ಶಾಲೆಗಳಲ್ಲೂ ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಪೂರ್ಣ ಹಾಜರಾತಿಗೆ ಅವಕಾಶ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿ ಹಾಗೂ ಫೆಬ್ರುವರಿಯಲ್ಲಿ ಹಂತ ಹಂತವಾಗಿ ಪ್ರೌಢಶಾಲೆ ಹಾಗೂ ಕಾಲೇಜು ತರಗತಿಗಳನ್ನು ಆರಂಭ ಮಾಡಲಾಗಿತ್ತು. ಇದೀಗ ಎಲ್ಲಾ ಹಂತದ ತರಗತಿಗಳು ಪ್ರಾರಂಭವಾಗಿವೆ.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement