ಕಾಂಗ್ರೆಸ್‌ ಜೆಡಿಎಸ್‌ ಬಿ ಟೀಮ್‌ ಎಂಬುದು ಮೈಸೂರು ಪಾಲಿಕೆಯಲ್ಲಿ ಸಾಬೀತು

ಹಗರಿಬೊಮ್ಮನಹಳ್ಳಿ: ‘ಕರ್ನಾಕದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷದ ‘ಬಿ’ ಟೀಮ್ ಎನ್ನುವುದು ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಆಯ್ಕೆ ವಿಚಾರದಲ್ಲಿ ಸಾಬೀತಾಗಿದೆ’ ಎಂದು ರಾಜ್ಯದ ಸಮಾಜ‌ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ನೂತನ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೆಡಿಎಸ್‌ ಅನ್ನು ಬಿಜೆಪಿಯ ‘ಬಿ’ ಟೀಮ್‌ ಎಂದು ಕರೆದಿದ್ದ ಸಿದ್ದರಾಮಯ್ಯನವರು ಈ ಮೈಸೂರು ಬೆಳವಣಿಗೆ ಬಗ್ಗೆ ಏನು ಹೇಳುತ್ತಾರೆ. ಮೈಸೂರಿನಲ್ಲಿ ಮೇಯರ್‌ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷವು ಜೆಡಿಎಸ್‌ನ ಬಿ ಟೀಂಆಗಿ ಕಅರ್ಯನಿರ್ಬಹಸಿದ್ದು ಸಿದ್ದರಾಮಯ್ಯ ಅವರಿಗೆ ಕಾಣಲಿಲ್ಲವೇ? ಜೆಡಿಎಸ್‌ ಅನ್ನು ಬಿಜೆಪಿಯ ಬಿ ಟೀಂ ಎಂದಿದ್ದ ಸಿದ್ದರಾಮಯ್ಯ ಅವರು ಈಗೇನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಸಿಂದಗಿ, ಬಸವ ಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ವಾಲ್ಮೀಕಿ ಸಮಾಜದ ಕುಲಶಾಸ್ತ್ರ ಅಧ್ಯಯನ ಪೂರ್ಣಗೊಂಡಿದ್ದು, ಪರಿಶಿಷ್ಟ ಪಂಗಡ ಮೀಸಲಾತಿ ಶೇ 7.5 ಕ್ಕೆ ಹೆಚ್ಚಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement