ತಮಿಳು ಸಂಸ್ಕೃತಿ ನಾಶಕ್ಕೆ ಪ್ರಧಾನಿ ಮೋದಿ ಹುನ್ನಾರ: ರಾಹುಲ್‌ ಆರೋಪ

ಕನ್ಯಾಕುಮಾರಿ: ತಮಿಳು ಸಂಸ್ಕೃತಿಯನ್ನು ಗೌರವಿಸದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತಮಿಳುನಾಡಿನ ಪ್ರತ್ಯೇಕ ಸಾಂಸ್ಕೃತಿಕ ಗುರುತನ್ನು ನಾಶ ಮಾಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
.ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊರಬೇಕಿದ್ದ ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ, ಪ್ರಧಾನಿ ಮೋದಿ ಬಯಸಿದ್ದನ್ನೇ ಮಾಡುತ್ತಾ ತಮಿಳು ಸಹೋದರರಿಗೆ ದ್ರೋಹ ಮಾಡುತ್ತಿದ್ದಾರೆ ಎಂದರು.
ಪಳನಿಸ್ವಾಮಿ ತಮಿಳು ಸಂಸ್ಕೃತಿಯನ್ನು ಅವಮಾನಿಸಲು ಯಾವುದೇ ಕಾರಣಕ್ಕೂ ಬಿಡಬಾರದು. ಆರ್‌ಎಸ್‌ಎಸ್‌ ಮೊದಲಿನಿಂದಲೂ ದ್ರಾವಿಡ ಸಂಸ್ಕೃತಿಯನ್ನು ತಿರಸ್ಕರಿಸುತ್ತಲೇ ಬಂದಿದ್ದು, ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದಿಂದ ತಮಿಳು ಸಂಸ್ಕೃತಿಗೆ ಮತ್ತಷ್ಟು ಹಾನಿಯಾಗುವುದುಯ ಖಚಿತ ಎಂದು ಎಚ್ಚರಿಸಿದರು.
ಪ್ರಧಾನಿ ಮೋದಿ ಒಂದು ದೇಶ, ಒಂದು ಸಂಸ್ಕೃತಿ ಹಾಗೂ ಒಂದು ಇತಿಹಾಸದ ಕುರಿತು ಮಾತನಾಡುತ್ತಾರೆ. ಹಾಗಾದರೆ ತಮಿಳುನಾಡಿನ ಸಂಸ್ಕೃತಿ ಹಾಗೂ ಇತಿಹಾಸ ಭಾರತದ ಅವಿಭಾಜ್ಯ ಅಂಗವಲ್ಲವೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು. ತಮಿಳುನಾಡು ತನ್ನದೇ ಆದ ವಿಶಿಷ್ಟ ಸಾಂಸ್ಕೃತಿಕ ಇತಿಹಾಸವನ್ನು ಹೊಂದಿದ್ದು, ಓರ್ವ ಭಾರತೀಯನಾಗಿ ಈ ಭವ್ಯ ಇತಿಹಾಸವನ್ನು ಕಾಪಾಡುವುದು ತಮ್ಮ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಹೇಳಿದರು.
ಭಾನುವಾರ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಸಿರಿವಂತ ಸಂಸ್ಕೃತಿಯ ತಮಿಳು ಭಾಷೆಯಲ್ಲಿ ಕಲಿಯಲು ಸಾಧ್ಯವಾಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement