ಪಶ್ಚಿಮ ಬಂಗಾಳದಲ್ಲಿ ೮ ಹಂತದ ಚುನುವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅರ್ಜಿ

ನವ ದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಎಂ.ಎಲ್. ಶರ್ಮಾ ಎಂಬವರು ಸಲ್ಲಿಸಿರುವ ಮನವಿಯಲ್ಲಿ, ರಾಜ್ಯದಲ್ಲಿ ಎಂಟು ಹಂತದ ಚುನಾವಣೆಗಳನ್ನು ನಡೆಸದಂತೆ ತಡೆಯಲು ಮತದಾನ ಸಮಿತಿಗೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಕೋರಲಾಗಿದೆ. ಫೆಬ್ರವರಿ 26 ರಂದು ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ತೃಣಮೂಲ ಕಾಂಗ್ರೆಸ್ ಪಕ್ಷದ ನೇತೃತ್ವದ ಪಶ್ಚಿಮ ಬಂಗಾಳವು ಮಾರ್ಚ್ 27 ರಿಂದ ಏಪ್ರಿಲ್ 29ರ ವರೆಗೆ ಎಂಟು ಸುತ್ತುಗಳಲ್ಲಿ ಚುನಾವಣೆ ನಡೆಸಲಿದ್ದು, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮತದಾನ ಏಪ್ರಿಲ್ 6 ರಂದು ಒಂದು ಹಂತದಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ.
ಕೆಲವೇ ದಿನಗಳಲ್ಲಿ ವಿಚಾರಣೆಗೆ ಬರಬಹುದಾದ ಈ ಅರ್ಜಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಘೋಷಣೆಗಳನ್ನು ಜಪಿಸಿದರೆ ಎಫ್‌ಐಆರ್ ದಾಖಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕು ಎಂದು ಸಹ ಮನವಿ ಮಾಡಲಾಗಿದೆ.
“ಜೈ ಶ್ರೀ ರಾಮ್, ಇತರ ಧಾರ್ಮಿಕ ಘೋಷಣೆಗಳು ಸೌಹಾರ್ದ ಕೆಡಿಸುತ್ತದೆ. ಮತ್ತು ಐಪಿಸಿ ಮತ್ತು ಜನ ಪ್ರಾತಿನಿಧ್ಯ ಕಾಯ್ದೆ 1951ರ ಅಡಿಯಲ್ಲಿ ಅಪರಾಧವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement