ಬೆಂಗಳೂರು: ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.
ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸದೇ ಡಿಕೆಶಿ ತಮಗೆ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯ ಜೊತೆಗೂಡಿ ದೆಹಲಿಯ ಹೈಕಮಾಂಡ್ ಗೆ ದೂರು ನೀಡುವುದಾಗಿ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದರು.
ಅಖಂಡ ಹೇಳಿಕೆಗಿಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಖಂಡ ಶ್ರೀನಿವಾಸ್ ಮೂರ್ತಿಯಾಗಿರಬಹುದು ಅಥವಾ ಪಕ್ಷದಲ್ಲಿ ಯಾರೇ ಇರಬಹುದು, ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕೇ ವಿನಃ ಬಹಿರಂಗವಾಗಿ ಚರ್ಚಿಸಬಾರದು. ಪಕ್ಷದ ಯಾವುದೇ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವಾಗಿ ಎಐಸಿಸಿ ಮುಖಂಡ ಮಧು ಯಸ್ಕಿಗೌಡ್ ಮೈಸೂರಿಗೆ ಭೇಟಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆ ಏಕೆ ಮೇಯರ್ ಸ್ಥಾನ ಸಿಗಲಿಲ್ಲ ಎಂಬ ಬಗ್ಗೆ ಮಾಹಿತಿ ಪಡೆಯುತ್ತಾರೆ. ಮಧು ಯಸ್ಕಿಗೌಡ ನನ್ನನ್ನೂ ಸಹ ಭೇಟಿಯಾಗಿದ್ದಾರೆ. ಪಕ್ಷದಲ್ಲಿ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ. ಇಲ್ಲಿ ಶಿಸ್ತು ಮುಖ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ