ಅತ್ಯಾಚಾರ ಸಂತ್ರಸ್ತೆಗೆ ೨೬ ವಾರಗಳ ನಂತರ ಗರ್ಭಪಾತ ಸುರಕ್ಷಿತವೇ: ವರದಿ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ೧೪ ವರ್ಷದ ಅತ್ಯಾಚಾರ ಸಂತ್ರಸ್ತೆಗೆ, ಗರ್ಭಧಾರಣೆಯಾದ 26 ವಾರಗಳ ನಂತರ ಗರ್ಭಪಾತ ಮಾಡುವುದು ಅವಳಿಗೆ ಸುರಕ್ಷಿತವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹರಿಯಾಣದ ಕರ್ನಾಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯು ವೈದ್ಯಕೀಯ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ, ಎ.ಎಸ್.ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಮೂವರು ವೈದ್ಯರನ್ನೊಳಗೊಂಡ ವೈದ್ಯಕೀಯ ಸಮಿತಿ ರಚಿಸಬೇಕು ಹಾಗೂ ಬಾಲಕಿಗೆ 26 ವಾರಗಳ ನಂತರ ಗರ್ಭಪಾತ ಮಾಡುವುದು ಸುರಕ್ಷಿತವೇ ಎಂದು ವಿಶ್ಲೇಷಣೆ ನಡೆಸಿ ಶುಕ್ರವಾರದ ಒಳಗೆ ವರದಿ ನೀಡಬೇಕು ಎಂದು ಆದೇಶಿಸಿದೆ.
ಗರ್ಭಪಾತಕ್ಕೆ ಅನುಮತಿ ಕೋರಿ ಬಾಲಕಿ ಅರ್ಜಿ ಸಲ್ಲಿಸಿದ್ದಾಳೆ. ಹರಿಯಾಣದ 14 ವರ್ಷದ ಬಾಲಕಿ ತನ್ನ ಸೋದರ ಸಂಬಂಧಿಯಿಂದಲೇ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದಾಳೆ. ಆದರೆ ಗರ್ಭಧಾರಣೆಯಿಂದ ಮಗು ಹಾಗೂ ಬಾಲಕಿಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಗೋಚರಿಸುತ್ತಿದ್ದು, ಬಾಲಕಿ ಮಾನಸಿಕ ಸಮಸ್ಯೆಗೂ ಒಳಗಾಗುವ ಸಾಧ್ಯತೆಯಿದೆ ಎಂದು ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಆದರೆ, ವೈದ್ಯಕೀಯ ಗರ್ಭಪಾತ ಕಾಯ್ದೆಯ 3 (2) (b) ಸೆಕ್ಷನ್ ಪ್ರಕಾರ, ನ್ಯಾಯಾಲಯದ ಸಮ್ಮತಿಯಿಲ್ಲದೇ 20 ವಾರಗಳ ನಂತರ ಗರ್ಭಪಾತ ಮಾಡುವುದು ನಿಷಿದ್ಧ.ಹೀಗಾಗಿ ಶುಕ್ರವಾರದ ಒಳಗೆ ಈ ಸಂಬಂಧ ಉತ್ತರ ನೀಡಬೇಕು ಎಂದು ಹರಿಯಾಣ ಸರ್ಕಾರಕ್ಕೂ ನ್ಯಾಯಾಲಯ ನೋಟಿಸ್ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ ಸಭೆ : ಚುನಾವಣೆಗೆ ಮುನ್ನ ಪಕ್ಷದೊಳಗೆ-ಹೊರಗೆ ಬಲವಾದ ಸಂದೇಶ ರವಾನೆ..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement