ಶಿವಮೊಗ್ಗ: ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದ್ದ ಬೆನ್ನಲ್ಲೇ ಇದಕ್ಕೆ ಇದಕ್ಕೆ ಪುಷ್ಟಿನೀಡುವಂತೆ ಮುಂಬರುವ ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ದಿನದಿಂದಲೇ ಬದಲಾವಣೆಯಾಗಲಿದೆ. ಶಿವಮೊಗ್ಗದಲ್ಲಿಯೇ ಆ ದೃಢ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ಜನ್ಮದಿನದ ವೇಳೆ ಕಾಂಗ್ರೆಸ್ ನಾಯಕರೇ ಶುಭ ಕೋರಲು ಆಗಮಿಸಿದ್ದು ವಿಶೇಷವಾಗಿತ್ತು.
ಕಾಂಗ್ರೆಸ್ ಸೇರುತ್ತೀರಾ ಎಂದು ಸುದ್ದಿಗಾರರು ಪ್ರಶ್ನಿಗೆ ಉತ್ತರಿಸಿದ ಅವರು, ಜನ್ಮದಿನದಂದು ಸುಳ್ಳು ಹೇಳುವುದಿಲ್ಲ. ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಉತ್ತರಿಸಿದ್ದಾರೆ.
ನಾನು ಇನ್ನೂ ಜೆಡಿಎಸ್‍ನಲ್ಲೇ ಇದ್ದೇನೆ. ಪಕ್ಷದಲ್ಲಿ ಕೆಲ ಗೊಂದಲಗಳಿವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಣ್ಣವರೇ ನನ್ನನ್ನು ಬೆಳೆಸಿ ರಾಜ್ಯಾದ್ಯಂತ ಪಕ್ಷಕ್ಕಾಗಿ ಓಡಾಡುವಂತೆ ಮಾಡಿದ್ದಾರೆ. ಇದುವರೆಗೂ ಅವರ ಬಳಿ ಯಾವ ಚರ್ಚೆಯನ್ನೂ ನಡೆಸಿಲ್ಲ. ಚರ್ಚೆ ಮಾಡಿದ ನಂತರ ಹಿತೈಷಿಗಳು, ಕಾರ್ಯಕರ್ತರು ಏನು ಹೇಳುತ್ತಾರೋ ಅದರ ಮೇಲೆ ಶೀಘ್ರದಲ್ಲಿಯೇ ಸ್ಪಷ್ಟ ನಿರ್ಧಾರಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ