ತಮಿಳುನಾಡು: ಚಿನ್ನಮ್ಮ (ಶಶಿಕಲಾ) ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ

ಎಐಎಡಿಎಂಕೆ ಮಾಜಿ ನಾಯಕಿ ಹಾಗೂ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತರಾದ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಬರೋಬ್ಬರಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಇತ್ತೀಚೆಗೆ ಬಿಡುಗಡೆಯಾಗಿದ್ದರು.ಬಿಡುಗಡೆಯಾದ ನಂತರ ಸಕ್ರಿಯವಾಗಿ ರಾಜಕೀಯಕ್ಕೆ ಬರುವುದಕ್ಕಾಗಿ ಘೋಷಿಸಿದ್ದ ಶಶಿಕಲಾ ಅವರು ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ.
ವಿ,ಕೆ ಶಶಿಕಲಾ ನಟರಾಜನ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶಶಿಕಲಾ ನಟರಾಜನ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.
ಕಳೆದ ಜನವರಿಯಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಮುಖ್ಯಸ್ಥರಾಗಿ ಅಧಿಕಾರ ಮರಳಿ ಪಡೆಯುವ ನಿರೀಕ್ಷೆಯಲ್ಲಿದ್ದ ವಿ.ಕೆ.ಶಶಿಕಲಾ, ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳಷ್ಟೇ ಬಾಕಿ ಇರುವಾಗ್ಲೇ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾ ರೆ.ಈ ಕುರಿತು ಹೇಳಿಕೆಯೊಂದನ್ನ ಬಿಡುಗಡೆ ಮಾಡಿರುವ ಶಶಿಕಲಾ, ‘ಜಯಾ (ದಿವಂಗತ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ) ಬದುಕಿದ್ದಾಗಲೂ ನಾನು ಅಧಿಕಾರ ಅಥವಾ ಸ್ಥಾನ ಪಡೆದಿರಲಿಲ್ಲ. ಅವಳು ಸತ್ತ ಮೇಲೆಯೂ ಹಾಗೆ ಮಾಡುವುದಿಲ್ಲ. ನಾನು ರಾಜಕೀಯದಿಂದ ದೂರ ಉಳಿದಿದ್ದೇನೆ, ಆದರೆ, ಅವರ ಪಕ್ಷ ಗೆಲ್ಲಲಿ ಎಂದು ಪ್ರಾರ್ಥಿಸುತ್ತೇನೆ, ಅವರ ಪರಂಪರೆ ಮುಂದುವರೆಯಲಿ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಚಿನ್ನಮ್ಮ ಎಂದೇ ಪ್ರಖ್ಯಾತಿ ಪಡೆದಿರುವ ಶಶಿಕಲಾ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆಯಾಗಿದ್ದರು. ಈ ಮೂಲಕ ತಮಿಳುನಾಡಿನಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ ದೋಷಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದಿವಂಗತ ಅವರು ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು.

ಪ್ರಮುಖ ಸುದ್ದಿ :-   ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement