ತುಳಸಿ ಮುನಿರಾಜುಗೌಡಗೆ ಬಿ ಫಾರಂ : ೪ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಬುಧವಾರ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಅವರಿಗೆ ಬಿ ಫಾರಂ ವಿತರಿಸಿದರು.
ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಟೀಲ್ ಅವರು ಬಿ ಫಾರಂ ನೀಡಿ ಶುಭ ಕೋರಿದರು.ನಾಳೆ ತುಳಸಿ ಮುನಿರಾಜುಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.೪ರಂದು ಬೆಳಿಗ್ಗೆ 11ಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಪಕ್ಷದ ರಾಜ್ಯ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್,ರಾಜ್ಯದ ಸಚಿವರು,ಸಂಸದರು, ಶಾಸಕರು ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊ | ಕಾರವಾರದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಮಾಲ್ವನ್

ನಿಮ್ಮ ಕಾಮೆಂಟ್ ಬರೆಯಿರಿ

advertisement