ಬೆಳಗಾವಿ: ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಬೆಂಬಲಿಗರಿಂದ ಬಸ್‌ಗಳಿಗೆ ಕಲ್ಲು ತೂರಾಟ

ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅವರು ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಬಾರದು ಹಾಗೂ ಅವರು ರಾಜೀನಾಮೆ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ.
ಬೆಳಗಾವಿ, ಗೋಕಾಕಿನ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್ ಬಸ್ ನಿಲ್ದಾಣಕ್ಕೆ ತೆರಳಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಎಂಟು ಬಸ್ ಗಳ ಗಾಜುಗಳು ಪುಡಿ ಪುಡಿಯಾಗಿವೆ.
ಅಲ್ಲದೇ ಗೋಕಾಕ್ ಫಾಲ್ಸ್ ರಸ್ತೆ, ಕೊಣ್ಣೂರ, ಮಮದಾರ, ಪಾರನಟ್ಟಿ ಕ್ರಾಸ್ ನಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಗೋಕಾಕ ನಗರದ ಬಸವ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಜಾರಕಿಹೊಳಿ ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement