ವಕೀಲರಿಗೆ ಜೀವವಿಮೆ, ಆರೋಗ್ಯವಿಮೆ ಸೌಲಭ್ಯ ಯೋಜನೆ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

posted in: ರಾಜ್ಯ | 0

ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿರುವಂತೆಯೇ ರಾಜ್ಯದಲ್ಲಿಯೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಜೀವ ಲೆಕ್ಕಿಸದೆ ಕೆಲಸ ಮಾಡುತ್ತಿರುವ ವಕೀಲರಿಗೆ ವಿಮೆ ಸೌಲಭ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಕಳೆದ ವರ್ಷ ಮಾರ್ಚ್ನಲ್ಲಿ ಬರೆದಿದ್ದ ಪತ್ರ ಆಧರಿಸಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ವಕೀಲರ ಸಂಘ, ವಕೀಲರ ಪರಿಷತ್ ಪದಾಧಿಕಾರಿಗಳು, ವಿಮೆ ಕಂಪನಿಗಳೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ತಿಳಿಸಲಾಗಿದೆ. ಮಾರ್ಚ್ 17 ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಗುಡ್‌ ಬೈ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement