ಹತ್ರಾಸ ಕೊಲೆ ಪ್ರಕರಣ: ಮುಖ್ಯ ಆರೋಪಿ ತಲೆಗೆ ೧ ಲಕ್ಷ ರೂ.ಘೋಷಣೆ

ಹತ್ರಾಸ್(ಉತ್ತರಪ್ರದೇಶ): ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್‌ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ.
ಇತರ ಇಬ್ಬರು ಆರೋಪಿಗಗಳ ಸುಳಿವಿಗೆ ತಲಾ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದ್ದು, ಈವರೆಗೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಕಳೆದ ಸೋಮವಾರ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಹಗಲೇ ಗುಂಡಿಕ್ಕಿ ಸಾಯಿಸಲಾಗಿತ್ತು. ಗೌರವ್ ಸೊಂಗ್ರಾ ತನ್ನ ಮನೆಗೆ ನುಗ್ಗಿ ತನ್ನ ಪುತ್ರಿಯನ್ನು ಚುಡಾಯಿಸಿದ್ದಾನೆ ಎಂದು ರೈತ ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರಕರಣ ದಾಖಲಿಸಿದ್ದ. ಆರೋಪಿ ಗೌರವ್ ರೈತನ ಕಿರಿಯ ಮಗಳನ್ನು ಮದುವೆಯಾಗಲು ಮತ್ತು ಪ್ರಕರಣ ಹಿಂಪಡೆಯಲು ಒತ್ತಾಯಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗುಂಡೇಟಿಗೆ ಬಲಿಯಾದ ವ್ಯಕ್ತಿಯ ಪುತ್ರಿ ಆರು ಜನರ ವಿರುದ್ಧ ಲಿಖಿತ ದೂರು ನೀಡಿದ್ದು, ಇದರಲ್ಲಿ ನಾಲ್ವರನ್ನು ಗುರುತಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಒಬ್ಬನನ್ನು ಈಗಾಗಲೇ ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.ಆರೋಪಿಗಳ ವಿರುದ್ಧ ಎನ್‌ಎಸ್‌ಎ ಅಡಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ವಾರದ ಕುಸಿತದ ನಂತರ ಕೆಲವು ಅದಾನಿ ಗ್ರೂಪ್ ಷೇರುಗಳು ಚೇತರಿಕೆ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement