ನನ್ನ ಬಳಿ ಇನ್ನೂ ಮೂವರು ಪ್ರಭಾವಿಗಳ ಸಿಡಿ ಇದೆ: ಕಲ್ಲಹಳ್ಳಿ ಮತ್ತೊಂದು ಬಾಂಬ್‌

ಬೆಂಗಳೂರು: ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ, ರಮೇಶ್ ಜಾರಕಿಹೊಳಿ ರಾಸಲೀಲೆ ಎನ್ನಲಾದ ಸಿಡಿ ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ. ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ. ಹೀಗಾಗಿ ಕಾನೂನು ತಜ್ಞರ ಜೊತೆಗೆ ಮಾತನಾಡಿ ಅವರ ಹೆಸರನ್ನು ಬಹಿರಂಗ ಪಡಿಸುತ್ತೇನೆ ಎಂದರು.
ಯಾವ ಪಕ್ಷ, ಯಾರು, ಅವರ ಹೆಸರು ಎಲ್ಲಾ ವಿಚಾರವನ್ನು ನಾನು ಆ ಮೇಲೆ ಹೇಳುತ್ತೇನೆ. ಸರ್ಕಾರದ ಉನ್ನತ ಹುದ್ದೆಯಲ್ಲಿ ಇರುವವರೂ ಇದ್ದಾರೆ. ಅವರ ಸಿಡಿಗಳು ಇದೆ ಎನ್ನುವುದನ್ನು ಮಾತ್ರ ನಾನು ಹೇಳಬಹುದು ಎಂದ ಅವರು ಜಾರಕಿಹೊಳಿ ರಾಸಲಲೀಲೆಯದ್ದು ಎನ್ನಲಾದ ಸಿಡಿ ಪ್ರಕರಣದ ತನಿಖೆಯಾಗಬೇಕು. ಇದರ ಸತ್ಯಾಸತ್ಯತೆ ಪರಿಶಿಲನೆಯಾಗಬೇಕು. ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಹೀಗಾಗಿ ಸಂತ್ರಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದು ಅಲ್ಲಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ್ದರು.ಈಗ ಅವರು ಇನ್ನೂ ಮೂವರು ಪ್ರಭಾವಿಗಳ ಸಿಡಿ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಮತ್ತೆ ಸದ್ದುಮಾಡಲಿಯೇ..?

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement