ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಹೊರಬಿದ್ದ ಮಾರನೇ ದಿನ ಬುಧವಾರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ.
ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೂ ತನಗೂ ಸಮಬಂಧವಿಲ್ಲ, ಅದು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ವಿಯದಲ್ಲಿ ನಾನು ನಿರ್ದೋಷಿಯಾಗುವ ಭರವಸೆಯಿದ್ದರೂ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸಬೇಉ ಎಂದು ರಮೇಶ ಜಾರಕಿಹೊಳಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು. ರಾಜೀನಾಮೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅಂಗೀಕರಿಸಿದ್ದು, ರಾಜ್ಯಪಾಲರಿಗೆ ಕಳುಹಿಸಿದ್ದಾರೆ.

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement