ರಾಸಲೀಲೆ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಬುಧವಾರ ರಾಜೀನಾಮೆ ನೀಡಿದ್ದಾರೆ.
ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು.
ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಜಾರಕಿಹೊಳಿಯಿಂದ ಈ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷದ ನಾಯಕರು ಆಗ್ರಹಿಸಿದ್ದರು. ಈ ಪ್ರಕರಣದಿಂದ ಪಕ್ಷಕ್ಕೆ ಭಾರಿ ಮುಜುಗರ ಉಂಟಾಗುವುದನ್ನ ತಪ್ಪಿಸಲು ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡಬೇಕಾಯಿತು.
ಪಕ್ಷಕ್ಕೆ ಮುಜುಗರ ತಪ್ಪಿಸಲು ಬುಧವಾರ ಸಂಜೆಯೊಳಗೆ ಸಚಿವರ ರಾಜೀನಾಮೆ ಪಡೆಯುವಂತೆ ಪಕ್ಷದ ದೆಹಲಿ ವರಿಷ್ಠರು ಸೂಚನೆ ನೀಡಿದ್ದರು ಎನ್ನಲಾಗಿದ್ದು, ವರಿಷ್ಠರ ಸೂಚನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಬಸವರಾಜ ಬೊಮ್ಮಾಯಿ ಮೂಲಕ ರಮೇಶ್ ಜಾರಕಿಹೊಳಿಗೆ ತಲುಪಿಸಿದ್ದರು. ಹೀಗಾಗಿ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎನ್ನಲಾಗಿದೆ.
ನಾನು ನಿರ್ದೋಷಿಯಾಗಿ ಬಂದ ಬಳಿಕ ನನಗೆ ಸಚಿವ ಸ್ಥಾನ ಕೊಡಬೇಕು ಹಾಗೂ ಸದ್ಯ ಜಲಸಂಪನ್ಮೂಲ ಖಾತೆಯನ್ನು ನನ್ನ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಕೊಡಬೇಕು ಎಂದು ಹೇಳಿ ರಾಜೀನಾಮೆ ರಾಜೀನಾಮೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement