ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 ಪ್ರಕರಣ ಸೋಂಕು ವದರಿಯಾಗಿದೆ. ಕೇರಳದಲ್ಲಿ 2,938, ಪಂಜಾಬ್‌ನಲ್ಲಿ 729 ಹೊಸ ಪ್ರಕರಣಗಳು ವರದಿಯಾಗಿವೆ.
ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜತೆ ಕೇಂದ್ರವು ನಿರಂತರ ಸಂಪರ್ಕದಲ್ಲಿದೆ ಎಂದೂ ಸಚಿವಾಲಯ ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ