ತೆರಿಗೆ ವಂಚನೆ ಆರೋಪದ ಅಡಿ ಐಟಿ ಅಧಿಕಾರಿಗಳು ಬುಧವಾರ ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್ ಕಶ್ಯಪ್, ವಿಕ್ರಮಾದಿತ್ಯ ಮೋಟ್ವಾನೆ, ವಿಕಾಸ್ ಬಹ್ಲ್ ಹಾಗೂ ಮಧು ಮಾಂಟೇನಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ
. ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಮುಂಬೈ ಹಾಗೂ ಪುಣೆಯ ೩೦ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಫ್ಯಾಂಟಮ್ ಫಿಲ್ಮ್ಸ್ ಹಾಗೂ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಗೆ ಸಂಬಂಧಿಸಿದಂತೆ ಐಟಿ ಇಲಾಖೆ ಬುಧವಾರ ಬೆಳಿಗ್ಗೆಯಿಂದ ದಾಖಲೆಗಳನ್ನ ಪರಿಶೀಲಿಸುತ್ತಿದೆ ಎಂದು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಫ್ಯಾಂಟಮ್ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ ನಿರ್ಮಿಸಿದ ಸಿನಿಮಾಗಳು ಸೂಪರ್ಹಿಟ್ ಆಗಿದ್ದರೂ ತೆರಿಗೆ ವಂಚನೆ ಮಾಡಿದ ಉದಾಹರಣೆಗಳು ಸಾಕಷ್ಟಿವೆ. ಕಂಪನಿಯ ಖಾತೆಯಲ್ಲಿರುವ ಹಣಕ್ಕೂ, ಕಂಪನಿಯ ದಾಖಲೆಯಲ್ಲಿ ತೋರಿಸಿರುವ ಆದಾಯದ ಮೊತ್ತಕ್ಕೂ ವ್ಯತ್ಯಾಸ ಕಂಡು ಬಂದಿದ್ದರಿಂದ ಈ ದಾಳಿ ನಡೆಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಆದಾಯ ತೆರಿಗೆ ದಾಳಿಯು ಯಾವುದೇ ನಿರ್ದಿಷ್ಟ ವ್ಯಕ್ತಿಯ ವಿರುದ್ಧವಲ್ಲ. ಆದರೆ ಅವರು ಮಾಲೀಕತ್ವ ಹೊಂದಿರುವ ಕಂಪನಿಗೆ ಸಂಬಂಧಪಟ್ಟಿದ್ದಾಗಿದೆ. ಹೀಗಾಗಿ ಇದಕ್ಕೆ ಸಂಬಂಧಿಸುವವರೆಲ್ಲರ ಮನೆ ಮೇಲ ದಾಳಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ