ಪತ್ನಿಯ ಸಮಾಧಿ ಬಳಿಯೇ ಪತಿ ಆತ್ಮಹತ್ಯೆ

ಹುಣಸೂರು:  ಪತ್ನಿ ಆತ್ಮಹತ್ಯೆಯಿಂದ ಮನನೊಂದ  ಪತ್ನಿಯ ಸಮಾಧಿ ಬಳಿಯೇ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೊಸರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪಾಜಿ ನಾಯಕ ಆತ್ಮಹತ್ಯೆ ಮಾಡಿಕೊಂಡವ.  ಕಳೆದ ಎರಡು ದಿನಗಳ ಹಿಂದೆಯಷ್ಟೇ ಕೌಟುಂಬಿಕ ಕಲಹದಿಂದ ಪತ್ನಿ ಅನಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಇದರಿಂದ  ತೀವ್ರವಾಗಿ ಮನನೊಂದ ಪತಿ ಸಿದ್ದಪ್ಪಾಜಿಯೂ ಸಹ ವಿಷ ಸೇವಿಸಿ ಪತ್ನಿ ಸಮಾಧಿ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಸಿದ್ದಪ್ಪಾಜಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಸುದ್ದಿ ತಿಳಿದ ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ. ನಾಣು ಉಚ್ಚಾಟನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement