ಯಾಂಗೋನ್: ಮ್ಯಾನ್ಮಾರ್‌ನಲ್ಲಿ ಸೈನ್ಯ ದಂಗೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಸೇನಾ ಪಡೆಗಳು ಅಶ್ರುವಾಯು, ರಬ್ಬರ್ ಬುಲೆಟ್, ಗುಂಡಿನ ದಾಳಿ ನಡೆಸುತ್ತಿದೆ. ಬುಧವಾರ ನಡೆದ ಹಿಂಸಾಚಾರದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.
ಮ್ಯಾನ್ಮಾರ್‌ನಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎನ್ನುವುದು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ, ಬುಧವಾರ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯ ಕಳವಳ ವ್ಯಕ್ತಪಡಿಸಿದೆ’ ಎಂದು ವಿಶ್ವಸಂಸ್ಥೆ ಅಧಿಕಾರಿಗಳು ಸ್ವಿಟ್ಜರ್ಲೆಂಡ್‌ನಲ್ಲಿ ತಿಳಿಸಿದ್ದಾರೆ.
ಕಳೆದ ತಿಂಗಳು ನಡೆದ ಮಿಲಿಟರಿ ಕ್ಷಿಪ್ರ ದಂಗೆ ನಡೆಸಿ ಆಂಗ್ ಸಾನ್ ಸೂ ಕಿ ಆಡಳಿತ ಪದಚ್ಯುತಗೊಳಿಸಿದ್ದನ್ನು ವಿರೋಧಿಸಿ ದೇಶದಾದ್ಯಂತ ನಾಗರಿಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಜನರನ್ನು ಚದುರಿಸಲು ಭದ್ರತಾ ಪಡೆಗಳು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದು, ಪತ್ರಕರ್ತರು ಸೇರಿದಂತೆ ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಚರ್ಚಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ಶುಕ್ರವಾರ ಸೇರವ ಸಾಧ್ಯತೆ ಇದ್ದು, ಮಹತ್ವ ಪಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ