ಶಾಸಕ ಸಂಗಮೇಶ್ ಅಮಾನತು ಮಾಡಿದ ಸ್ಪೀಕರ್‌: ಆದೇಶ ವಾಪಸ್’ಗೆ ಒತ್ತಾಯಿಸಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು

ಬೆಂಗಳೂರು: ವಿಧಾನಸಬೆಯಲ್ಲಿ ಗುರುವಾರ ಒಂದು ದೇಶ, ಒಂದೇ ಚುನಾವಣೆಯ ಮೇಲಿನ ಚರ್ಚೆ ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದಂ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನದಿಂದ ಅಮಾನತುಗೊಳಿಸಿದ್ದಾರೆ.
ಮತ್ತೆ ಸದನ ಆರಂಭವಾಗುತ್ತಲೇ ವೇರ್ ಈಸ್ ದಿ ಆರ್ಡರ್ ಎನ್ನುತ್ತಲೇ ಮಾರ್ಷಲ್ ಗಳ ವಿರೋಧದ ನಡುವೆಯೂ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕ ಸಂಗಮೇಶ ಅವರನ್ನು ಸದನದೊಳಗೆ ಕರೆದೊಯ್ದ ವಿದ್ಯಮಾನವೂ ನಡೆಯಿತು.
ಅಮಾನತು ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.ಬೆಳಿಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಒಂದು ದೇಶ, ಒಂದೇ ಚುನಾವಣೆ ಮೇಲಿನ ಚರ್ಚೆ ಪ್ರಾರಂಭಕ್ಕೆ ಅನುವು ಮಾಡಿಕೊಟ್ಟ ನಂತರ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆ ಸಂದರ್ಭದಲ್ಲಿ ಸದನದ ಬಾವಿಗಿಳಿದಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರು ಶರ್ಟ್ ಬಿಚ್ಚಿ, ಪ್ರತಿಭಟನೆ ನಡೆಸಿದ್ದಕ್ಕೆ ಸ್ಪೀಕರ್ ಕೆಂಡಾಮಂಡಲವಾಗಿದ್ದರು. ಅಲ್ಲದೇ ವಿಧಾನ ಸಭೆ ಮುಂದೂಡಿದ ಸಂದರ್ಭದಲ್ಲಿ ಸ್ಪೀಕರ್ ಕಾಗೇರಿ ಶಾಸಕ ಸಂಗಮೇಶ ಅವರು ಸದನದಲ್ಲಿ ಶರ್ಟ್‌ ಬಿಚ್ಚಿ ಸದನದಲ್ಲಿ ಅಶಿಸ್ತು ತೋರಿದ ಕಾರಣ ನೀಡಿ, ಒಂದು ವಾರದ ಕಾಲ ಅವರನ್ನು ಕಲಾಪದಿಂದ ಅಮಾನತುಗೊಳಿಸಿದ್ದರು.ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್‌ ಶಾಸಕರು ಸದನದ ಬಾವಿಗಳಿದು ಅಮಾನತು ವಾಪಸ್‌ ಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ , ಶಾಸಕ ಸಂಗಮೇಶ ಅಮಾನತು ಆದೇಶ ವಾಪಸ್ ಪಡೆಯದ ಹೊರತು, ಸದನದ ಯಾವುದೇ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂಬುದಾಗಿ ತಿಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement