ಬೆಂಗಳೂರು: ‘ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಗುರುವಾರ ವಿಧಾನಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ವಿಚಾರವಾಗಿ ಮಾತನಾಡಿದ ಅವರು, ‘ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಗಳಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ, ಒಟ್ಟಾರೆ ದೇಶದ ಪ್ರಗತಿಯ ದೃಷ್ಟಿಯಿಂದ ಅನಿವಾರ್ಯ ಎಂದರು.
ಒಂದು ದೇಶ ಒಂದು ಚುನಾವಣೆ ಎಂಬುದು ಪ್ರಗತಿಪರ ಆಲೋಚನೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆದು ಭಾರತದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಯುವ ಪದ್ಧತಿ ಅನುಷ್ಠಾನಕ್ಕೆ ಬರಲಿ. ರಾಜ್ಯ ಸರ್ಕಾರಗಳು ಸಂಸತ್ತಿನ ಉಭಯ ಸದನಗಳಲ್ಲಿ ಹಾಗೂ ರಾಜ್ಯದ ವಿಧಾನಮಂಡಲಗಳಲ್ಲಿ ಚಿಂತನ-ಮಂಥನ ನಡೆಸಿದರೆ ಮಾತ್ರ ಒಂದು ರಾಷ್ಟ್ರ ಒಂದು ಚುನಾವಣೆ ಅನುಷ್ಠಾನಗೊಳಿಸಲು ಸಾಧ್ಯ ಎಂದು ಹೇಳಿದರು.
ಚುನಾವಣೆ ಹಣಬಲದ ಮೇಲೆ ನಿಂತಿರುವುದು ದುರದೃಷ್ಟಕರ:ಇತ್ತೀಚಿನ ದಿನಗಳಲ್ಲಿ ಚುನಾವಣೆ ಯಶಸ್ಸು ಹಣಬಲದ ಮೇಲೆ ನಿಂತಿರುವುದು ದುರದೃಷ್ಟಕರ ಎಂದು ಹೇಳಿದ ಯಡಿಯೂರಪ್ಪ, ಚುನಾವಣೆ ವ್ಯಕ್ತಿತ್ವ, ಚರಿತ್ರೆ ಹಾಗೂ ಅಭ್ಯರ್ಥಿಗಳ ವರ್ಚಸ್ಸು ಮತ್ತು ವಿಶ್ವಾಸಾರ್ಹತೆ ಅವಲಂಬಿಸಬೇಕು. ಪಾರದರ್ಶಕ ಚುನಾವಣೆಗಳು ನಡೆಯುವುದರಿಂದ ಪಕ್ಷ, ಅಭ್ಯರ್ಥಿ ಹಾಗೂ ಮತದಾರರ ಮೇಲೆ ಸಕಾರಾತ್ಮಕವಾಗಿ ಪರಿಣಾಮ ಬೀರಿ ದೇಶದಲ್ಲಿ ಮಹತ್ವದ ಬದಲಾವಣೆ ತರಲಿದೆ. ಆಳವಾದ ಅಧ್ಯಯನ ಮತ್ತು ಸಮಾಲೋಚನೆ, ಸವಿಸ್ತಾರವಾದ ಚರ್ಚೆ ನಡೆಯಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿರುವ ನಮಗೆ ಚುನಾವಣೆಯಲ್ಲಿ ಏಕರೂಪ ವ್ಯವಸ್ಥೆ ಜಾರಿಗೆ ತರುವುದು ಕಷ್ಟವೇನಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಿಧಾನಮಂಡಲವು ಸಂಕ್ಷಿಪ್ತ ನಿರ್ಣಯ ಕೈಗೊಂಡು ಶಿಫಾರಸು ಮಾಡಲಿ ಎಂದು ಯಡಿಯೂರಪ್ಪ ಹೇಳಿದರು.
geek
ನಮ್ಮದು ಒಕ್ಕೂಟ ವ್ಯವಸ್ಥೆ. ನಮ್ಮಂತಹ ವೈವಿಧ್ಯಮಯ ದೇಶಕ್ಕೆ ಒಂದು ದೇಶ ಒಂದು ಚುನಾವಣೆ ಅಭಿವೃದ್ಧಿಗೆ ಮಾರಕವೇ ಸರಿ.