ಕೊವಿಡ್‌ ನಿರ್ವಹಣೆಯಲ್ಲಿ 3000 ಕೋಟಿ ರೂ. ಭ್ರಷ್ಟಾಚಾರ:ನ್ಯಾಯಾಂಗ ತನಿಖೆಗೆ ಸಿದ್ದು ಒತ್ತಾಯ

ಚಿಕ್ಕಬಳ್ಳಾಪುರ: ಕೊವಿಡ್‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ 3000 ಕೋಟಿ ರೂ. ಭ್ರಷ್ಟಾಚಾರ ನಡೆಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ನಿಂದ ಏರ್ಪಡಿಸಿದ್ದ ಬೃಹತ್ ಜನಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಯಾವುದೇ ದೇಶ ಕೊರೊನಾ ನೆಪ ಹೇಳೆ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿಲ್ಲ, ಆದರೆ, ರಾಜ್ಯದ ಬಿಜೆಪಿ ಸರ್ಕಾರ ಕೊರೊನಾ ಹೆಸರಲ್ಲಿ ಹಣ ಲೂಟಿ ಹೊಡೆದಿದೆ ಎಂದು ದೂರಿದರು.

ಈ ವಿಷಯನ್ನು ಈಗಾಗಲೇ ವಿಧಾನ ಸಭೆಯಲ್ಲಿ ಅಂಕಿ-ಅಂಶಗಳ ಸಮೇತ ಪ್ರಸ್ತಾಪಿಸಿದ್ದೇನೆ. ಆದರೆ, ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪುತಿಲ್ಲ. ಇದಕ್ಕಾಗಿ ಅನೇಕ ವಿಷಯದಲ್ಲಿ ರಾಜ್ಯ ಸರ್ಕಾರದ ಮೇಲೆ ಅನುಮಾನವಿದೆ ಎಂದರು.
ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ತಲಾ 7ಕೆಜಿ ಅಕ್ಕಿ ನೀಡಲು ಪ್ರಾರಂಭಿಸಿದೆ. ದುರಂತ ಎಂದರೆ ಇಂದಿನ ಸರ್ಕಾರ ತಲಾ ಮೂರು ಕೆ.ಜಿ. ಅಕ್ಕಿ ನೀಡುವ ಮೂಲಕ ಹಸಿದ ಹೊಟ್ಟೆಗೆ ಅನ್ನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅದಿಕಾರಕ್ಕೆ ಬಂದೇ ಬರುತ್ತದೆ. ಆಗ 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.ಇದಕ್ಕೂ ಮುನ್ನ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಇಲ್ಲಿನ ಕಂದವಾರ ಕೆರೆಗೆ ಬಾಗಿನ ಅರ್ಪಣೆ ಮಾಡಿದರು.
ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಧ್ರುವನಾರಾಯಣ್, ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್, ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟಿಲï, ಕೇಂದ್ರದ ಮಾಜಿ ಸಚಿವರಾದ ಎಂ.ವೀರಪ್ಪಮೊಯ್ಲಿ, ಕೆ.ಹೆಚ್.ಮುನಿಯಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮುಖಂಡರಾದ ವಿ.ಮುನಿಯಪ್ಪ, ಕೃಷ್ಣಬೈರೇಗೌಡ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement