ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ಹಿರೇನಾಗವಲ್ಲಿ ಸ್ಫೋಟ ಪ್ರಕರಣ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಮತ್ತಿತರ ವಸ್ತು ಸ್ಫೋಟಗೊಂಡು 6 ಮಂದಿ ಮೃತಪಟ್ಟ ಘಟನೆ ವಿಧಾನ ಪರಿಷತ್‍ನಲ್ಲಿ ಗುರುವಾರ ಪ್ರತಿಧ್ವನಿಸಿತು.ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಒಂದು ತಿಂಗಳ ಅವಯಲ್ಲಿ ಎರಡು ಘಟನೆ ಸಂಭವಿಸಿದೆ.
ಶಿವಮೊಗ್ಗದಲ್ಲಿ ಸ್ಫೋಟ ನಡೆದು ಐವರು ಅಮೂಲ್ಯ ಜೀವ ಕಳೆದುಕೊಂಡರು. ಈ ಬಗ್ಗೆ ಬಿಗಿಯಾದ ನಿಯಮಾವಳಿ ಇಲ್ಲ, ಮಾರ್ಗಸೂಚಿ ಇದ್ದರೂ ಸಮರ್ಪಕವಾಗಿ ಜಾರಿಗೊಳಿಸುತ್ತಿಲ್ಲ. ಸಾರ್ವಜನಿಕರ ಜೀವ ಮತ್ತು ಸಂಪತ್ತು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪದಲ್ಲಿ ಆರೋಪಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ಸಾರ್ವಜನಿಕ ಮಹತ್ವದ್ದಾಗಿದ್ದು, ಚರ್ಚೆಗೆ ಅವಕಾಶ ಕೊಡಬೇಕು. ಈ ಸರ್ಕಾರಕ್ಕೆ ಪಂಚೇಂದ್ರಿಯಗಳಿವೆಯೋ, ಇಲ್ಲವೋ ಎಂಬ ಅನುಮಾನವಿದೆ ಎಂದು ಟೀಕಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ನಿಲುವಳಿ ಸೂಚನೆ ಬದಲಿಗೆ ನಿಯಮ 68ರಡಿ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement