ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ.
ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ ಪಿಜಿಗಳಲ್ಲಿ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗಿಲ್ಲ.
ಮಹಿಳೆಯು ಆರ್‌ಟಿ ನಗರದಲ್ಲಿ ವಾಸಿಸುವ ಗುಮಾನಿ ಮೇರೆಗೆ ಬುಧವಾರ ೪೦ ಕ್ಕಿಂತ ಹೆಚ್ಚು ಮಹಿಳಾ ಪೊಲೀಸರು ಆರ್‌ಟಿ ನಗರ ಸುತ್ತ ಮುತ್ತ ಪಿಜಿಗಳಲ್ಲಿ ಹುಡುಕಾಟ ನಡೆಸಿದ್ದರು. ಇದುವರೆಗೂ ಸಂತ್ರಸ್ತ ಯುವತಿ ಮೊಬೈಲ್ ನಂಬರ್ ಸಹ ಪೊಲೀಸರಿಗೆ ಸಿಕ್ಕಿಲ್ಲ.
ಸಂತ್ರಸ್ತ ಯುವತಿಯು ಹೇಳಿಕೆ ನೀಡದ ಹಿನ್ನೆಲೆಯಲ್ಲಿ ಎರಡು ದಿನ ಕಳೆದರೂ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಕೊಂಡಿಲ್ಲ.
ಇದಕ್ಕೆ ಪ್ರಮುಖ ಕಾರಣ ದೂರಿನಲ್ಲಿರುವ ಅಪೂರ್ಣ ಹಾಗೂ ಸಂತ್ರಸ್ತೆಯ ಬಗ್ಗೆ ಮಾಹಿತಿ ಇಲ್ಲದಿರುವುದು ತನಿಖೆಗೆ ಹಿನ್ನೆಡೆಯಾಗಿದೆ.ಈ ದಿಸೆಯಲ್ಲಿ ದಿನೇಶ್ ಕಲ್ಲಹಳ್ಳಿಗೆ ಸಂತ್ರಸ್ತೆ ಹಾಗೂ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಗುರುವಾರ ಬೆಳಗ್ಗೆ ೧೧ಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಕಲ್ಲಹಳ್ಳಿ ಗೈರು:
ಆದರೆ ಪೊಲೀಸರ ನೋಟೀಸ್ ಸ್ವೀಕರಿಸಿದ ದಿನೇಶ್ ಕಲ್ಲಹಳ್ಳಿ ಅವರು ಗುರುವಾರ ವಿಚಾರಣೆಗೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಾ. ೯ರಂದು ಬರುತ್ತೇನೆ ಎಂದು ಪೊಲೀಸ್ ಅಧಿಕಾರಿಗೆ ಪತ್ರ ಬರೆದಿದ್ದಾರೆ.
ನನಗೆ ಸೂಕ್ತ ಭದ್ರತೆ ಬೇಕಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಮಾ.೯ರಂದು ಹಾಜರಾಗುತ್ತೇನೆ ಎಂದು ದಿನೇಶ್ ಕಲ್ಲಹಳ್ಳಿ ವಾಟ್ಸ್ ಆಫ್ ಮೂಲಕ ಇನ್ಸ್‌ಪೆಕ್ಟರ್ ಮಾರುತಿಗೆ ಪತ್ರ ರವಾನಿಸಿ ಫೋನ್ ಮೂಲಕವೂ ಮಾತನಾಡಿ ತಿಳಿಸಿದ್ದಾರೆ.
ಪೊಲೀಸ್ ಭದ್ರತೆ:
ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕನಕಪುರ ಗ್ರಾಮಾಂತರ ಪೊಲೀಸರಿಗೆ ದಿನೇಶ್ ಕಲ್ಲಹಳ್ಳಿ ದೂರು ಕೊಟ್ಟಿದ್ದು, ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ದೂರುದಾರ ದಿನೇಶ್ ಕಲ್ಲಹಳ್ಳಿ ಸಂತ್ರಸ್ತೆ ಸಂಪರ್ಕದ ಬಗ್ಗೆ ಮಾಹಿತಿ ನೀಡಿದ ಬಳಿಕ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement