2020-21ನೇ ಸಾಲಿನ ಜನವರಿ ಅಂತ್ಯಕ್ಕೆ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸಂಗ್ರಹಿಸಿದ ಹಣವೆಷ್ಟೆಂದರೆ..

posted in: ರಾಜ್ಯ | 0

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಅಧಿವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಮೇಲಿನ ಶುಲ್ಕ ಕಡಿಮೆ ಮಾಡುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.ಪ್ರಶ್ನೆ ಕೇಳಿದ ಪ್ರಕಾಶ್ ರಾಥೋಡ್ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿ ಹೋಗುತ್ತಿದ್ದು, ಆದರೂ ತೆರಿಗೆ ಕಡಿಮೆ ಮಾಡದೇ ಇರುವುದರ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸದಸ್ಯ ಬಿ.ಎಂ.ಫಾರೂಕ್ ಪ್ರಶ್ನೆಗೆ ಉತ್ತರಿಸಿದ ಕೋಟಾ ಶ್ರೀನಿವಾಸಪೂಜಾರಿ, ರಾಜ್ಯದಲ್ಲಿ 13 ಸಾವಿರ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ. ನವೀಕರಿಸಬಹುದಾದ ಇಂಧನ ಯೋಜನೆಗಳ ಸಾಮರ್ಥ್ಯ 15,052 ಮೆಗಾವ್ಯಾಟ್ ಮೀರಿದೆ. ಹೀಗಾಗಿ ವಿದ್ಯುತ್ ಬ್ಯಾಂಕಿಂಗ್ ಸೌಲಭ್ಯ ವಾಪಸ್ ಪಡೆಯಲಾಗಿದೆ. ವಿದ್ಯುತ್ ಬ್ಯಾಂಕಿಂಗ್‍ನಿಂದಾಗಿ ಆರ್ಥಿಕ ಏರುಪೇರಾಗುತ್ತಿವೆ. ದರ ಕಡಿಮೆ ಇದ್ದಾಗ, ಹೆಚ್ಚು ಇದ್ದಾಗ ವಿದ್ಯುತ್ ಉತ್ಪಾದನೆ ಮಾರಾಟದಲ್ಲಿ ವ್ಯತ್ಯಯಗಳಾಗುತ್ತಿವೆ. ಹಾಗಾಗಿ ಬ್ಯಾಂಕಿಂಗ್ ಸೌಲಭ್ಯ ನಿಲ್ಲಿಸಲಾಗಿದೆ ಎಂದರು.
ಹಿರಿಯ ಸದಸ್ಯ ಪ್ರತಾಪ್‍ಚಂದ್ರಶೆಟ್ಟಿ, ವಿದ್ಯುತ್ ಇಲಾಖೆಯ ಖಾಸಗೀಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವ ಕೋಟಾ ಶ್ರೀನಿವಾಸಪೂಜಾರಿ ಉತ್ತರ ನೀಡಿದರು. ಆದರೆ ಇದು ದೊಡ್ಡ ಸಮಸ್ಯೆಯಾದ್ದರಿಂದ ಮುಖ್ಯಮಂತ್ರಿಯವರೇ ಉತ್ತರ ಕೊಡಬೇಕು, ಸಭನಾಯಕರು ಸಮಗ್ರವಾಗಿ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಪ್ರತಾಪ್‍ಚಂದ್ರಶೆಟ್ಟಿ ಆಕ್ಷೇಪಿಸಿದಾಗಹಾಗಾಗಿ ಮುಂದಿನ ವಾರ ಮುಖ್ಯಮಂತ್ರಿ ಅವರಿಂದಲೇ ಉತ್ತರ ಕೊಡಿಸುವುದಾಗಿ ಸಭಾಪತಿ ಬಸವರಾಜಹೊರಟ್ಟಿ ಪ್ರಶ್ನೆ ಮುಂದೂಡಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಧಾರವಾಡ: ಗರ್ಭಿಣಿಯ ಚೆಕ್​ಅಪ್​ ವೇಳೆ ವೈದ್ಯಕೀಯ ನಿರ್ಲಕ್ಷ್ಯ ತೋರಿದ ವೈದ್ಯೆಗೆ ₹ 11.10 ಲಕ್ಷ ಪರಿಹಾರ ನೀಡಲು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement