ಶ್ರೀನಗರ: ಆಸ್ತಿ ಮುಟ್ಟುಗೋಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೆಷನ್ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದಡಿಸೆಂಬರ್ 19ರಂದು ಫಾರೂಕ್ ಅಬ್ದುಲ್ಲಾಗೆ ಸೇರಿದ ಶ್ರೀನಗರ, ಬಾರಾಮುಲ್ಲಾ ಮತ್ತು ಜಮ್ಮುವಿನಲ್ಲಿರುವ ಮೂರು ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳನ್ನುಮುಟ್ಟುಗೋಲು ಹಾಕಿಕೊಂಡಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿನ ಜಮೀನುಗಳನ್ನು ಸಹ ಜಪ್ತಿ ಮಾಡಲಾಗಿತ್ತು.
‘ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿ ಮೀರಿ ನಮ್ಮ ಪೂರ್ವಜರಿಂದ ದೊರೆತ ಮತ್ತು ಕುಟುಂಬದ ಆಸ್ತಿಯನ್ನು ಕಾನೂನುಬಾಹಿರವಾಗಿ ಮುಟ್ಟುಗೋಲು ಹಾಕಿಕೊಂಡಿದೆ’ ಎಂದು ಫಾರೂಕ್ ಅಬ್ದುಲ್ಲಾ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ