ಕಲಬುರ್ಗಿ ಸರ್ಕಾರಿ ಪ್ರೌಢಶಾಲೆ ೧೫ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಕಲಬುರ್ಗಿ : ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಡೌನ್ ಮಾಡಿ, ಒಂದು ವಾರ ರಜೆ ಘೋಷಿಸಲಾಗಿದೆ.
ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಮಾರ್ಚ್ 1 ರಂದು 63 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಿ ಮಾದರಿ ತೆಗೆದುಕೊಂಡಿದ್ದರು. 63 ಪೈಕಿ 22 ವಿದ್ಯಾರ್ಥಿಗಳ ವರದಿ ಬಂದಿದ್ದು, ಅದರಲ್ಲಿ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.
ಪಾಸಿಟಿವ್ ಬಂದ ಮಕ್ಕಳ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದಾಗ ಫೆ.26ಕ್ಕೆ ಬೇಡಸೂರ ತಾಂಡಾ ಹಾಗೂ ಫೆ.18ಕ್ಕೆ ನಾಮುತಾಂಡಾದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಮುಂಬೈಯಿಂದ ಜನರು ಪಾಲ್ಗೊಂಡಿದ್ದರು. ಅದರಲ್ಲಿ ಈ ಶಾಲೆಯ ಇಬ್ಬರು ಮಕ್ಕಳು ಭಾಗವಹಿಸಿದ್ದರು. ಇದರಿಂದ ಕೋವಿಡ್ ಹರಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ.ರಾಜಶೇಖರ ಮಾಲಿ ತಿಳಿಸಿದ್ದಾರೆ.
ಕೋವಿಡ್ ಕಂಡು ಬಂದ ಈ ವಿದ್ಯಾರ್ಥಿಗಳಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಇನ್ನೂ 41 ವಿದ್ಯಾರ್ಥಿಗಳ ವರದಿಗಳು ಬಾಕಿ ಇವೆ. ಪಾಸಿಟಿವ್ ಬಂದಿರುವ 15 ವಿದ್ಯಾರ್ಥಿಗಳನ್ನು ಹೋಂ ಐಸೋಲೋಷನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement